ಪ್ರಮುಖ ಸುದ್ದಿಮೈಸೂರು

ಮೈಸೂರಿನಲ್ಲಿ ಐಟಿ ವಿಚಾರಣೆಗೆ ಹಾಜರಾಗಲಿರುವ ನಟಿ ರಶ್ಮಿಕಾ ಮಂದಣ್ಣ

ಮೈಸೂರು/ಮಡಿಕೇರಿ, ಜ.21:- ಇತ್ತೀಚಿಗೆ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಮಡಿಕೇರಿಯಲ್ಲಿರುವ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸುಮಾರು ಎರಡು ದಿನಗಳ ಕಾಲ ನಡೆದ ಪರಿಶೀಲನೆಯಲ್ಲಿ ಕೆಲ ಮಹತ್ತರ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಶ್ಮಿಕಾ ಹಾಗೂ ಕುಟುಂಬದವರು ವಿಚಾರಣೆಗೆ ಹಾಜರಾಗಲಿದ್ದಾರೆ.

ಇಂದು ಬೆಳಗ್ಗೆ 11.30ಕ್ಕೆ ಮೈಸೂರಿನ ಐಟಿ ಕಚೇರಿಗೆ ಹಾಜರಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ರಶ್ಮಿಕಾ ತಂದೆ ಮದನ್​ ಮಂದಣ್ಣ ಹಾಗೂ ತಾಯಿ ಸುಮನ್ ಮಂದಣ್ಣ ಈಗಾಗಲೇ ಮೈಸೂರಿಗೆ ತೆರಳಿದ್ದಾರೆ. ನಟಿ ರಶ್ಮಿಕಾ ಹೈದ್ರಾಬಾದ್​ನಿಂದ ಬಂದು ವಿಚಾರಣಾ ಸಮಯಕ್ಕೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: