ಮೈಸೂರು

ಬಸ್ಸು-ದ್ವಿಚಕ್ರವಾಹನ ಮುಖಾಮುಖಿ ಡಿಕ್ಕಿ: ಸವಾರ ಸಾವು

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಗುರುವಾರ ರಾತ್ರಿ 10ರ ಸುಮಾರಿಗೆ ಮುಡಾ ವೃತ್ತದ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ದ್ವಿಚಕ್ರವಾಹನ ಸವಾರ ಉರುಳಿಬಿದ್ದ ಪರಿಣಾಮ ತಲೆಗೆ ಗಂಭೀರ ಏಟು ಬಿದ್ದು, ಅಧಿಕ ಪ್ರಮಾಣದಲ್ಲಿ ರಕ್ತಸ್ರಾವವಾದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಬಸ್ಸು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಪಘಾತದ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಪ್ರತಿಭಟನೆಯಲ್ಲಿ ನಿರತರಾದರು. ಇಲ್ಲಿ ಒಂದು ಹಂಪ್ಸ್ ಹಾಗೂ ಸಿಗ್ನಲ್ ಗಳನ್ನು ಅಳವಡಿಸಲಾಗಿಲ್ಲ. ನಾಲ್ಕು ಕಡೆಯಿಂದಲೂ ವಾಹನಸವಾರರು ಏಕಾಏಕಿ ನುಗ್ಗುತ್ತಾರೆ. ಇದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ ಎಂದು ಆರೋಪಿಸಿದರು.

ಸ್ಥಳಕ್ಕೆ ಕೆ.ಆರ್.ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಬೈಕ್ ಸವಾರ ಯಾರು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಆತನ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: