ಮೈಸೂರು

ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ ಪ್ರತಿಭಟನೆ

ಭೀಕರ ಬರಗಾಲದಿಂದ ಬಸವಳಿದ ರೈತರ ಸಾಲ ಮನ್ನಾ, ಬೆಳೆ ನಷ್ಟ ಪರಿಹಾರಕ್ಕಾಗಿ ನೀರು, ಮೇವು ಹಾಗೂ ಉದ್ಯೋಗ ಖಾತ್ರಿಗಾಗಿ ಸರ್ಕಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಭಾರತ ಕಮ್ಯುನಿಷ್ಟ್ ಪಕ್ಷದ  ಮೈಸೂರು ಜಿಲ್ಲಾ ಮಂಡಳಿ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ಗಾಂಧಿವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಇತ್ತೀಚೆಗೆ ಕೇಂದ್ರ ಸರ್ಕಾರಿ ನೌಕರರ ವೇತನ ಆಯೋಗದಲ್ಲಿ ಮಾಡಲಾಗಿರುವ 18ಸಾವಿರ ಕನಿಷ್ಠ ವೇತನದ ಶಿಫಾರಸ್ಸನ್ನು ಅಂಗನವಾಡಿ, ಬಿಸಿಯೂಟ, ಆಶಾ ಇತ್ಯಾದಿ ಕೇಂದ್ರದ ಯೋಜನೆಗಳಲ್ಲಿ ದುಡಿಯುತ್ತಿರುವ ಲಕ್ಷಾಂತರ ಕಾರ್ಮಿಕರಿಗೆ ಜಾರಿಗೊಳಿಸಿಲ್ಲ. ರಾಜ್ಯ ಸರ್ಕಾರ ಕೂಡ ತಾನೇ ನಿಗದಿ ಮಾಡಿರುವ 10,500ರೂ.ಗಳ ಕನಿಷ್ಠ ವೇತನವನ್ನು ತನ್ನದೇ ಕೈಕೆಳಗೆ ಗೌರವಧನ, ಗುತ್ತಿಗೆ, ದಿನಗೂಲಿ, ಹೊರಗುತ್ತಿಗೆ ಇತ್ಯಾದಿ ಹೆಸರಿನಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಹಾಗೂ ಇತರ ಅಸಂಘಟಿತ ಕಾರ್ಮಿಕರಿಗೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ನೀಡುವ ಸರೋಜಿನಿ ಮಹಿಷಿ ವರದಿಗೆ ಪರಿಷ್ಕೃತ ಶಿಫಾರಸ್ಸು ಮಾಡಿರುವ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಸಮಿತಿ ವರದಿಯನ್ನು ಅಂಗೀಕರಿಸಬೇಕು. ಕಾರ್ಮಿಕ ಇಲಾಖೆಯಲ್ಲಿ ಶೇ.35ರಷ್ಟು ಕೆಲಸ ಖಾಲಿ ಇದ್ದು, ಆಯಾ ಜಾಗದಲ್ಲಿ ಕೆಲಸ ನಿರ್ವಹಿಸಲು ಸರ್ಕಾರ ಕೆಲಸಗಾರರನ್ನು ನೇಮಕ ಮಾಡಿಕೊಳ್ಳಬೇಕು. ಮಾದರಿ ಸ್ಥಾಯಿ ನಿಯಮಾವಳಿಗೆ ತಿದ್ದುಪಡಿ ತಂದು ನಿವೃತ್ತಿ ವಯಸ್ಸನ್ನು 58ರಿಂದ 60ಕ್ಕೆ ಹೆಚ್ಚಿಸಬೇಕು. ಮೈಸೂರು ನಗರದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ತ್ವರಿತವಾಗಿ ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸಬೇಕಲು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾರ್ಯದರ್ಶಿ ಹೆಚ್.ಆರ್.ಶೇಷಾದ್ರಿ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: