ಮೈಸೂರು

ಉಪಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ : ವಿ.ಶ್ರೀನಿವಾಸ್ ಪ್ರಸಾದ್

ನಂಜನಗೂಡು ಉಪಚುನಾವಣೆಯಲ್ಲಿ ನನ್ನದು ಪಂಥಾಹ್ವಾನ, ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಬರಿ ಪಲಾಯನವಾದ ಎಂದು ಬಿಜೆಪಿ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ವಿ.ಶ್ರೀನಿವಾಸ್ ಪ್ರಸಾದ್ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ಉಪಚುನಾವಣೆ ಮುಂದಿನ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಸಿದ್ದರಾಮಯ್ಯನವರ ದರ್ಪ, ಖರ್ಗೆಯವರ ಧಿಮಾಕಿಗೆ ಜನ ತಕ್ಕ ಉತ್ತರ ನೀಡುತ್ತಾರೆ.  ಚುನಾವಣೆ ಮುಗಿಯಲಿ ಯಾರು ಗೆಲ್ಲುತ್ತಾರೆ ನೋಡೋಣ ಎಂದಿದ್ದಾರೆ. ನಾನು ಅದನ್ನೇ ಹೇಳುತ್ತೇನೆ. ಚುನಾವಣೆ ಮುಗಿಯಲಿ ಯಾರು ಗೆಲ್ಲುತ್ತಾರೆ ಎಂದು ತಿಳಿಯಲಿದೆ. ನಾನು ಕಿವುಡ ಮೂಗ ಶಾಲೆಯ ಮೇಸ್ಟ್ರಲ್ಲ. ನನಗೂ ಮಾತನಾಡಲು ಬರುತ್ತದೆ. ನಾನು ಸಹ ಪಾಠ ಮಾಡುತ್ತೇನೆ ಎಂದು ತಿಳಿಸಿದರು. ಉಪಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವನ್ನು ಹೊಂದಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು‌. ಬಿಜೆಪಿಯ ಕೆಲವು ನಾಯಕರು ಶ್ರೀನಿವಾಸ್ ಪ್ರಸಾದ್ ಜೊತೆಗಿದ್ದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: