ಮೈಸೂರು

ಎರಡು ಪ್ರತ್ಯೇಕ ಆತ್ಮಹತ್ಯೆ : ಇಬ್ಬರು ಗೃಹಿಣಿಯರು ಆತ್ಮಹತ್ಯೆ

ಮೈಸೂರು,ಜ.23:-  ಮೈಸೂರು ನಗರದಲ್ಲಿ ಎರಡು ಪ್ರತ್ಯೇಕ ಆತ್ಮಹತ್ಯೆ ಪ್ರಕರಣ ನಡೆದಿದೆ. ಪ್ರಕರಣದಲ್ಲಿ ಇಬ್ಬರು ಗೃಹಿಣಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ರಾಜಾಜಿನಗರದ ನಿವಾಸಿ ಸ್ವಾಮಿ ಅವರ ಪತ್ನಿ ಶಾಂತಕುಮಾರಿ(28) ನೇಣಿಗೆ ಶರಣಾಗಿದ್ದಾರೆ. ಇವರಿಗೆ ಹತ್ತು ವರ್ಷದ ಹಿಂದೆ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಕ್ಷ್ಮಿಕಾಂತ ನಗರದ ನಿವಾಸಿ ರಶ್ಮಿ(34)ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಏಳು ವರ್ಷದ ಹಿಂದೆ ವಿವಾಹವಾಗಿದ್ದರು ಎಂದು ತಿಳಿದು ಬಂದಿದ್ದು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆದರೆ ಇವರಿಬ್ಬರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: