ಮೈಸೂರು

ಕುಲಸಚಿವ ಪ್ರೊ.ರಾಜಣ್ಣ ಅವರನ್ನು ವಜಾಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾಲಯದಲ್ಲಿ ದುರಾಡಳಿತ ನಡೆಸುತ್ತಿರುವ ಕುಲಸಚಿವ ಪ್ರೊ.ಆರ್.ರಾಜಣ್ಣ ಅವರ ಅವರ ಅಕ್ರಮಗಳನ್ನು ತನಿಖೆ ಮಾಡಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ವಿವಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಯಾವುದೇ ಪತ್ರಿಕಾ ಪ್ರಕಟಣೆ ಇಲ್ಲದೇ ಮೀಸಲಾತಿ ನಿಯಮ ಅನುಸರಿಸದೇ ಜನವರಿ 10, 2017ರಂದು ಸುಮಾರು 200ಕ್ಕೂ ಅಧಿಕ ಬೋಧಕೇತರ ಸಿಬ್ಬಂದಿಗಳನ್ನು ನೇಮಿಸಿಕೊಂಡಿದ್ದಾರೆ. ರಾಜ್ಯಪಾಲರ ಆದೇಶವನ್ನು ಧಿಕ್ಕರಿಸಿ ಸುಮಾರು ಒಂದು ತಿಂಗಳು ಕಳೆದರೂ ಕಳೆದ ಸಿಂಡಿಕೇಟ್ ಸಭೆಯ ನಡಾವಳಿಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದಿದ್ದಾರೆ. ಕುಲಸಚಿವರ ಕಾರ್ಯಾಲಯದಿಂದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆರವುಗೊಳಿಸಿ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.

ಎಲ್ಲವುಗಳ ಹಿಂದೆ ವ್ಯವಸ್ಥಿತ ಪಿತೂರಿಯಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಪ್ರೊ.ರಾಜಣ್ಣ ಅವರ ದುರಾಡಳಿತದ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: