ಪ್ರಮುಖ ಸುದ್ದಿ

ಜನರಲ್ ತಿಮ್ಮಯ್ಯ ಸ್ಮಾರಕ ಭವನ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಸೂಚನೆ

ರಾಜ್ಯ(  ಮಡಿಕೇರಿ) ಜ.25 :- ಕಳೆದ ಹಲವು ವರ್ಷಗಳಿಂದ ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣ ಸಂಬಂಧ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕು. ಸ್ಮಾರಕ ಭವನ ನಿರ್ಮಾಣಕ್ಕೆ ಬಾಕಿ ಇರುವ ಅನುದಾನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ನೀಡಿದ್ದಾರೆ.

ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ಕಾಮಗಾರಿ ಪ್ರಗತಿ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ನ ಪ್ರಮುಖರಾದ ಮೇಜರ್ ನಂಜಪ್ಪ ಅವರು ಮಾತನಾಡಿ ಜನರಲ್ ತಿಮ್ಮಯ್ಯ ಅವರು ಹುಟ್ಟಿದ ದಿನದಂದು ಸ್ಮಾರಕ ಭವನ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಮನವಿ ಮಾಡಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷರಾದ ಕರ್ನಲ್ ಕಂಡ್ರತಂಡ ಸುಬ್ಬಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ದರ್ಶನ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ರಾಘವೇಂದ್ರ, ಅವರು ಹಲವು ಮಾಹಿತಿ ನೀಡಿದರು.  ಮಂಜುನಾಥ್, ಸಚಿನ್, ರಾಘವೇಂದ್ರ ಇತರರು ಹಾಜರಿದ್ದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: