ಮೈಸೂರು

ಡಿಸಿಎಂ ಆಗಬೇಕೆಂಬುದು ಜನರ ಬೇಡಿಕೆ ಅದನ್ನು ನಾನು ಅಲ್ಲಗಳೆಯುವುದಿಲ್ಲ : ಪರೋಕ್ಷವಾಗಿ ಡಿಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು

ಮೈಸೂರು,ಜ.26:- ಡಿಸಿಎಂ ಆಗಬೇಕೆಂಬುದು ಜನರ ಬೇಡಿಕೆ. ಜನರ ಬೇಡಿಕೆಯನ್ನು ನಾನು ಅಲ್ಲಗಳೆಯುವುದಿಲ್ಲ ಎಂದು ಹೇಳುವ ಮೂಲಕ  ಆರೋಗ್ಯ ಸಚಿವ ಶ್ರೀರಾಮುಲು ಪರೋಕ್ಷವಾಗಿ ಡಿಸಿಎಂ ಆಗಬೇಕೆಂಬ ಇಂಗಿತ ವ್ಯಕ್ತಪಡಿಸಿದ್ದಾರೆ.

ನಿನ್ನೆ ಸುತ್ತೂರಿನಲ್ಲಿ  ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಶ್ರೀರಾಮುಲು, ನಾನು ಉಪಮುಖ್ಯಮಂತ್ರಿಯಾಗಬೇಕು ಎನ್ನುವುದು ಜನರ ಬೇಡಿಕೆಯಾಗಿದೆ.ಅದನ್ನು ನಾನು ಅಲ್ಲಗೆಳೆಯುವುದಿಲ್ಲ, ಈ ಬಗ್ಗೆ ಪಕ್ಷದ ಹೈಕಮಾಂಡ್, ಸಿಎಂ ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು, ಉಪಚುನಾವಣೆಯಲ್ಲಿ ಗೆದ್ದ ಶಾಸಕರಿಗೆ ಸಿಎಂ ಮಾತು ಕೊಟ್ಟಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ಪಕ್ಷ ಕೊಟ್ಟಿರುವ ಮಾತಿನಂತೆ ನಡೆದುಕೊಳ್ಳುತ್ತಾರೆ. ಸೋತವರಿಗೆ ಸಚಿವರನ್ನಾಗಿ ಮಾಡುವ ಬೇಡಿಕೆ ಇದೆ. ಈ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸ್ಪಷ್ಟನೆ ನೀಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: