ದೇಶಪ್ರಮುಖ ಸುದ್ದಿ

ವಿವಿಐಪಿ ಹೆಲಿಕಾಪ್ಟರ್ ಹಗರಣ, ಮಾಧ್ಯಮ ಪಾತ್ರದ ತನಿಖೆ ಕುರಿತ ಅರ್ಜಿ ವಜಾ

ಅಗಸ್ಟಾ ವೆಸ್ಟ್ ಲ್ಯಾಂಡ್ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪಾತ್ರದ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಮಾಧ್ಯಮ ಪಾತ್ರದ ಬಗ್ಗೆ ಎಸ್ಐಟಿ ತನಿಖೆ ಕೋರಿ ಹಿರಿಯ ಪತ್ರಕರ್ತ ಹರಿ ಜೈಸಿಂಗ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ಪೀಠ, ಇದು ಮಾಧ್ಯಮ ಸ್ವಾತಂತ್ರದ ಮೇಲೆ ದಾಳಿ ಮಾಡಿದಂತಾಗುತ್ತದೆ. ಹಗರಣದಲ್ಲಿ ನೇರವಾಗಿ ಭಾಗಿಯಾಗದ ಹೊರತು ನಾವು ಮಾಧ್ಯಮ ವಿರುದ್ಧ ಯಾವುದೇ ತನಿಖೆಗೆ ಆದೇಶಿಸುವುದಿಲ್ಲ ಎಂದು ಹೇಳಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಕ್ಕೆ ಸ್ವಾತಂತ್ರ್ಯ ನೀಡಲಾಗಿದೆ. ಈ ವಿಚಾರದಲ್ಲಿ ನಾವು ಮಾಧ್ಯಮಗಳ ಹಕ್ಕನ್ನು ಮೊಟಕುಗೊಳಿಸುವುದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ ಮಾಧ್ಯಮ ಪಾತ್ರದ ಬಗ್ಗೆ ತನಿಖಾ ಸಂಸ್ಥೆ ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ  ಮುಂದೆ ಬಂದರೆ, ಆಗ ನಾವು ತನಿಖೆಗೆ ಆದೇಶಿಸುತ್ತೇವೆ ಎಂದು ಪೀಠ ಹೇಳಿದೆ ಎನ್ನಲಾಗಿದೆ.
ಕೆಲವು ಮಾಧ್ಯಮ ವ್ಯಕ್ತಿಗಳು ಲಂಚ ಪಡೆದು ವಿವಿಐಪಿ ಕ್ಯಾಪ್ಟರ್ ಒಪ್ಪಂದದ ಪರವಾಗಿ ವರದಿ ಮಾಡುವ ಮೂಲಕ ಸರ್ಕಾರದ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಪಿಐಎಲ್ ನಲ್ಲಿ ಆರೋಪಿಸಲಾಗಿತ್ತು.

Leave a Reply

comments

Related Articles

error: