ಕರ್ನಾಟಕಪ್ರಮುಖ ಸುದ್ದಿ

ಆಸ್ಪತ್ರೆಯಿಂದ ಮನೆಗೆ ಮರಳಿದ ಪಾರ್ವತಮ್ಮ ರಾಜ್ ಕುಮಾರ್

ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಶುಕ್ರವಾರ ಮನೆಗೆ ಮರಳಿದ್ದಾರೆ.

ಪಾರ್ವತಮ್ಮ ಅವರಿಗೆ ಶುಗರ್ ಲೆವೆಲ್ ಕಡಿಮೆ ಆಗಿತ್ತು. ಮಾತ್ರವಲ್ಲದೇ ಅವರಿಗೆ ಯೂರಿನ್ ಇನ್ಫೆಕ್ಷನ್ ಕೂಡ ಆಗಿತ್ತು. ಈಗ ಅವರ ಆರೋಗ್ಯ ಸುಧಾರಿಸಿದೆ. ಎಲ್ಲಾ ರೀತಿಯ ಟೆಸ್ಟ್ ಗಳನ್ನೂ ಮಾಡಲಾಗಿದೆ. ಮುಂದಿನ ವಾರ ಮತ್ತೆ ಜನರಲ್ ಚೆಕಪ್‍ಗೆ ಬರಲು ತಿಳಿಸಿದ್ದೇವೆ. ಸದ್ಯ ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದು ವೈದ್ಯ ಡಾ. ಸಂಜಯ್ ಕುಲಕರ್ಣಿ ಹೇಳಿದ್ದಾರೆ. ಸಕ್ಕರೆ ಕಾಯಿಲೆ ಸಮಸ್ಯೆಯಿಂದ ಬಳಲುತ್ತಿರುವ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಮಂಗಳವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ತಲೆ ಸುತ್ತು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಪುತ್ರ ರಾಘವೇಂದ್ರ ರಾಜ್ ಕುಮಾರ್ ಹಾಗೂ ಮೊಮ್ಮಗ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು.ಡಿಸ್ಚಾರ್ಜ್ ಸಂದರ್ಭದಲ್ಲಿ ಮಂಗಳಾ ರಾಘವೇಂದ್ರ ಮತ್ತು ಕುಟುಂಬದವರು ಜೊತೆಯಿದ್ದರು.(ಕೆ.ಎಸ್-ಎಸ್.ಎಚ್)

Leave a Reply

comments

Related Articles

error: