ಮೈಸೂರು

ಡಾ.ಶಿವಕುಮಾರ ಸ್ವಾಮೀಜಿಯವರ ಜನ್ಮೋತ್ಸವದ ಶೋಭಾಯಾತ್ರೆಗೆ ಅದ್ಧೂರಿ ಸ್ವಾಗತ

ಅಖಿಲ ಭಾರತ ವೀರಶೈವ ಮಹಾಸಭಾ, ಶರಣ ಸಾಹಿತ್ಯ ಪರಿಷತ್ತು ಹಾಗೂ ಬಸವ ಬಳಗಗಳ ಒಕ್ಕೂಟದ ವತಿಯಿಂದ ಡಾ. ಶಿವಕುಮಾರ ಸ್ವಾಮೀಜಿಯವರು ಅವರ 110ನೇ ಜನ್ಮದಿನೋತ್ಸವದ ಶೋಭಾಯಾತ್ರೆಯನ್ನು ಸುತ್ತೂರು ಶಾಖಾಮಠದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಮೈಸೂರು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ ಸಮಾರಂಭದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಮಾಜಿ ಸಚಿವ ಎಸ್.ಎ. ರಾಮದಾಸ್, ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್ ಇನ್ನಿತರರು ಭಾಗಿಯಾಗಿ ಶೋಭಯಾತ್ರೆ ರಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆತ್ಮೀಯವಾಗಿ ಸ್ವಾಗತ ಕೋರಿದರು. ಇದೇವೇಳೆ‌  ವಿವಿಧ ಮಠಾದೀಶರು ಸೇರಿದಂತೆ ಗಣ್ಯರು ಭಾಗಿಯಾಗಿದ್ದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: