ಮೈಸೂರು

ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರಿಂದ ಕಾಲ್ನಡಿಗೆ ಜಾಥಾ

ಮೈಸೂರು,ಜ.30-ಸಾರಿಗೆ ನೌಕರರು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಇಂದು ನಗರದಲ್ಲಿ ಕಾಲ್ನಡಿಗೆ ಜಾಥಾ ನಡೆಸಿತು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಿದರು.

ಈಗಾಗಲೇ ನಮ್ಮ ಸಂಸ್ಥೆಯ ಕೆಲವು ಕಾರ್ಮಿಕ ಸಂಘಟನೆಗಳು ವೇತನ ಹೆಚ್ಚಳಕ್ಕೆ ಮನವಿ ಸಲ್ಲಿಸಿವೆ. ಪ್ರತಿ ಭಾರಿ ವೇತನ ಹೆಚ್ಚಳ ಸಮಯದಲ್ಲಿ ಮುಷ್ಕರ ನಡೆದೇ ನಮ್ಮ ವೇತನ ಶೇ.5, 10, 12.5 ರಷ್ಟು ಹೆಚ್ಚಳ ಮಾಡಿಕೊಳ್ಳಲಾಗಿದೆ. ಹೀಗಾಗಿಯೂ ಸರ್ಕಾರಿ ನೌಕರರಿಗಿಂತ ಶೇ.30 ರಷ್ಟು ಕಡಿಮೆ ವೇತನ ಪಡೆಯುತ್ತಿದ್ದೇವೆ. ಈ ವೇತನದಲ್ಲಿ ಮಕ್ಕಳ ವಿದ್ಯಾಭ್ಯಾಸ, ಕುಟುಂಬ ನಿರ್ವಹಣೆ, ಆರೋಗ್ಯ ರಕ್ಷಣೆ ಸೇರಿದಂತೆ ಜೀವನ ನಿರ್ವಹಣೆಯೇ ಕಷ್ಟದಾಯಕವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮೂರು ವರ್ಷಗಳಿಂದ ಸರ್ಕಾರಕ್ಕೆ ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಮನವಿ ಸಲ್ಲಿಸಲಾಗುತ್ತಿದೆ. ಸರಕಾರವು ತಜ್ಞರ ಸಮಿತಿ ಮಾಡಿ ನಮ್ಮಲ್ಲಿ ಆಶಾ ಭಾವನೆ ಮೂಡಿಸಿದೆ. ಆದರೆ ತಜ್ಞರ ಸಮಿತಿಗೆ ಕಾಲಮಿತಿ ನಿಗಧಿಗೊಳಿಸಿಲ್ಲ. ಶೀಘ್ರವೇ ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಈ ಬಜೆಟ್ ಅಧಿವೇಶನದಲ್ಲಿ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. (ಕೆ.ಎಸ್, ಎಂ.ಎನ್)

 

Leave a Reply

comments

Related Articles

error: