ಮೈಸೂರು

ಸಾಹಿತಿ ಡಾ‌. ಎಸ್.ಎಲ್‌.ಭೈರಪ್ಪ ಅವರ ಕಾದಂಬರಿ ಪರ್ವ – 40 ರ ಅವಲೋಕನ

ಮೈಸೂರು,ಜ.31:- ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು ಮತ್ತು ಕನ್ನಡ ಸಾಹಿತ್ಯ ಕಲಾಕೂಟ, ಮೈಸೂರು ವತಿಯಿಂದ ನಾಡಿನ ಹೆಮ್ಮೆಯ ಸಾಹಿತಿ ಸರಸ್ವತಿ ಸಮ್ಮಾನ್ ಪುರಸ್ಕೃತರಾದ ಡಾ‌. ಎಸ್.ಎಲ್‌.ಭೈರಪ್ಪ ಅವರ ಕಾದಂಬರಿ ಪರ್ವ – 40 ರ ಅವಲೋಕನ ನಿನ್ನೆ ನಗರದ ಸಾಹಿತ್ಯ ಭವನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ಹೆಸರಾಂತ ವಿದ್ವಾಂಸರಾದ ಡಾ.ಪ್ರಧಾನ್ ಗುರುದತ್  ಮಾಡಿದರು. ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ  ಡಾ. ವೈ.ಡಿ‌ ರಾಜಣ್ಣ ವಹಿಸಿದ್ದರು. ಪರ್ವ ಕಾದಂಬರಿ ಕುರಿತು ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಮೊರಬದ ಮಲ್ಲಿಕಾರ್ಜುನ ವಿಶ್ಲೇಷಿಸಿದರು. ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷರಾದ ಎಂ.ಚಂದ್ರಶೇಖರ್ ಅವರು ಪ್ರಾಸ್ತಾವಿಕ ನುಡಿಯನ್ನಾಡಿದರು

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್ , ಗೌರವ ಕಾರ್ಯದರ್ಶಿಗಳಾದ ಕೆ.ಎಸ್ ನಾಗರಾಜ್ ಹಾಗೂ ಜಯಪ್ಪ ಹೊನ್ನಾಳಿ , ಗೌರವ ಕೋಶಾಧ್ಯಕ್ಷರಾದ ರಾಜಶೇಖರ್ ಕದಂಬ, ಪ್ರಧಾನ ಸಂಚಾಲಕರಾದ ಮೂಗೂರು ನಂಜುಂಡಸ್ವಾಮಿ , ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಅರವಿಂದ್ ಶರ್ಮ , ಕರ್ನಾಟಕ ಕನ್ನಡ ವೇದಿಕೆ ಅಧ್ಯಕ್ಷರಾದ ಸುರೇಶ್ ಬಾಬು ಹಾಗೂ ಸಾಹಿತ್ಯ ಅಭಿಮಾನಿಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: