ಮೈಸೂರು

ಕೊರೊನಾ ವೈರಸ್ ಆತಂಕ ಹರಡಿರುವ ಹಿನ್ನೆಲೆ : ಮೈಸೂರಿಗೆ ಬರುವ ಚೀನಾ ಪ್ರವಾಸಿಗರ ಮೇಲೆ ತೀವ್ರ ನಿಗಾ ;ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್ ಮಾಹಿತಿ

ಮೈಸೂರು,ಜ.31:- ಎಲ್ಲೆಡೆ ಕೊರೊನಾ ವೈರಸ್ ಆತಂಕ ಹರಡಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಬರುವ ಚೀನಾ ಪ್ರವಾಸಿಗರ ಮೇಲೆ ತೀವ್ರ ನಿಗಾ ಇರಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್ ತಿಳಿಸಿದರು.

ಕೊರೊನಾ ವೈರಸ್ ಆತಂಕದ ವಿಚಾರ ಕುರಿತು  ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಕೊರೊನಾ ವೈರಸ್ ಪತ್ತೆಗೆ ಕೆ.ಆರ್.ಆಸ್ಪತ್ರೆಯಲ್ಲಿ ವಿಶೇಷ ಲ್ಯಾಬ್ ಸ್ಥಾಪನೆ ಮಾಡಲಾಗಿದೆ. ಹೋಟೆಲ್‌ ಉದ್ಯಮ, ಟ್ರಾವೆಲ್ ಏಜೆನ್ಸಿ ಮೂಲಕ ಕರೋನಾ ವೈರಸ್ ಬಾಧಿತರ ಪತ್ತೆಗೆ ವ್ಯವಸ್ಥೆ ಮಾಡಲಾಗಿದ್ದು  ಕಳೆದ ಒಂದೂವರೆ ತಿಂಗಳಿಂದ ಚೀನಾ ಹಾಗೂ ಮೈಸೂರು ನಡುವೆ ಪ್ರವಾಸಿಗರ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ. ಸದ್ಯ ಮೈಸೂರಿನಲ್ಲಿ ಯಾವುದೇ ಆತಂಕ ಇಲ್ಲ ಎಂದು  ಹೇಳಿದರು.

ಕೇರಳ ರಾಜ್ಯದಿಂದ ಕೊರೊನಾ ವೈರಸ್ ಬಾಧಿತರು ಬಂದಿಲ್ಲ. ಇದರ ಬಗ್ಗೆ ಆತಂಕ ಬೇಡ, ಆದರೂ ಮುಂಜಾಗ್ರತೆ ಇರಲಿ. ಸಾಮಾನ್ಯ ವೈರಲ್ ಜ್ವರಕ್ಕೂ ಮೊದಲು ಚಿಕಿತ್ಸೆ ಪಡೆಯಿರಿ. ಇದಕ್ಕಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ವಿಶೇಷ ಲ್ಯಾಬ್ ತೆರೆಯಲಾಗಿದೆ ಎಂದು   ಮಾಹಿತಿ ನೀಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: