ಮೈಸೂರು

ಎಲ್ಲ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯರ ದಿಢೀರ್ ಪ್ರತಿಭಟನೆ

ಮೈಸೂರು,ಫೆ.1:- ಎಲ್ಲ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವಂತೆ ಒತ್ತಾಯಿಸಿ ಮಹಾರಾಣಿ ಕಲಾ ಕಾಲೇಜಿನ ವಿದ್ಯಾರ್ಥಿನಿಯರಿಂದು  ದಿಢೀರ್ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಜಮಾಯಿಸಿದ ವಿದ್ಯಾರ್ಥಿನಿಯರು ಎರಡನೆ ವರ್ಷ, ಮೂರನೇ ವರ್ಷದ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ನೀಡುವಂತೆ ಒತ್ತಾಯಿಸಿದರು. ಕಳೆದ ವರ್ಷ ಮಾಜಿ ಸಿಎಂ ಕುಮಾರಸ್ವಾಮಿ  ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವ ಭರವಸೆ ನೀಡಿದ್ದರು. ಆದರೆ ಭರವಸೆ ಈಡೇರಿಸದ ಹಿನ್ನಲೆಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: