ಮೈಸೂರು

ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವು: ಮೈಸೂರಿನಲ್ಲಿ ಕಾರ್ಯಕರ್ತರ ಸಂಭ್ರಮ

ಭಾರೀ ಕುತೂಹಲ ಕೆರಳಿಸಿದ್ದ ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ರಾಜ್ಯಗಳ ಚುನಾವಣೆಯಲ್ಲಿ ಉತ್ತರಪ್ರದೇಶದ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರ ಹಿನ್ನೆಲೆಯಲ್ಲಿ ಮೈಸೂರು ನಗರ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು.

ಮೈಸೂರಿನ ಅಗ್ರಹಾರ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಗೆ ಜೈಕಾರ ಕೂಗಿದರು. ಬಳಿಕ ಪಟಾಕಿ ಸಿಡಿಸಿ, ಸಿಹಿಹಂಚುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಕಾರ್ಯಕರ್ತರು ಮೋದಿಯವರು ಕಾಂಗ್ರೆಸ್ ಮುಕ್ತ ಭಾರತವನ್ನು ನಿರ್ಮಾಣ ಮಾಡಬೇಕೆನ್ನುವ ಸದಾಶಯ ಹೊಂದಿದ್ದು, ಅದರಂತೆ ಜನತೆ ಬಿಜೆಪಿಯತ್ತ ಒಲವು ತೋರುತ್ತಿದ್ದಾರೆ. ಸ್ವಾತಂತ್ರ್ಯಾನಂತರದಿಂದ ಕಾಂಗ್ರೆಸ್ ಆಡಳಿತ ದೇಶದಲ್ಲಿ ಯಾವುದೇ ಬದಲಾವಣೆಯನ್ನೂ ತಂದಿಲ್ಲ. ಈಗ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಜನತೆ ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದರು.

ಸುಮಾರು ಐವತ್ತಕ್ಕೂ ಅಧಿಕ ಕಾರ್ಯಕರ್ತರು ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: