ದೇಶಪ್ರಮುಖ ಸುದ್ದಿ

ಜಾಮಿಯಾ ವಿವಿಯಲ್ಲಿ ಮತ್ತೆ ಗುಂಡಿನ ದಾಳಿ

ನವದೆಹಲಿ,ಫೆ.3-ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಜಾಮಿಯಾ ವಿವಿ ಆವರಣದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ.

ಕೆಂಪು ಬಣ್ಣದ ಸ್ಕೂಟಿಯಲ್ಲಿ ಬಂದ ಇಬ್ಬರು ವ್ಯಕ್ತಿಗಳು ಜಾಮಿಯಾದ ಗೇಟ್ ನಂಬರ್ 7 ರಲ್ಲಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ದೆಹಲಿಯಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಡೆದ ಮೂರನೇ ಗುಂಡಿನ ದಾಳಿ ಇದಾಗಿದೆ. ಇದು ದೆಹಲಿಯ ಜನರಲ್ಲಿ ಆತಂಕ ಮೂಡಿಸಿದೆ. ಪದೇ ಪದೇ ಘಟನೆ ನಡೆಯುತ್ತಿರುವುದರಿಂದ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಜ.30 ರಂದು ಜಾಮಿಯಾ ವಿದ್ಯಾರ್ಥಿಗಳ ಮೆರವಣಿಗೆಯ ವೇಳೆ ಗುಂಡಿನ ದಾಳಿ ನಡೆಸಲಾಗಿತ್ತು. ಗೋಪಾಲ್ ಎಂಬಾತ ಪೊಲೀಸರ ಸಮ್ಮುಖದಲ್ಲೇ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ್ದ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದ.

ಬಳಿಕ ದೆಹಲಿಯ ಶಾಹಿನ್ ಬಾಗ್ನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿತ್ತು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದ ಆದರೆ ಯಾರು ಗಾಯಗೊಂಡಿರಲಿಲ್ಲ. ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು. (ಎಂ.ಎನ್)

Leave a Reply

comments

Related Articles

error: