ಮೈಸೂರು

ಪೌರಕಾರ್ಮಿಕರನ್ನು ನೇಮಿಸಲು ಒತ್ತಾಯಿಸಿ ಪ್ರತಿಭಟನೆ

ಸ್ವಚ್ಛ ನಗರಿ ಎಂದು ಖ್ಯಾತಿಗಳಿಸಿರುವ ಮೈಸೂರಿಗೆ ಪೌರಕಾರ್ಮಿಕರ ಕೊರತೆ ಎದ್ದು ಕಾಣುತ್ತಿದ್ದು ಕೂಡಲೇ ನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರಿನ ಕಾಡಾ ಕಚೇರಿ ಎದುರಿನ ಮೆಟ್ಟಿಲಿನ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಮಾತನಾಡಿ ಸ್ವಚ್ಛ ನಗರಿ ಎಂಬ ಖ್ಯಾತಿಗಳಿಸಿರುವ ಮೈಸೂರು ಮಹಾನಗರಪಾಲಿಕೆಗೆ ಪೌರಕಾರ್ಮಿಕರ ನೇಮಕವಾಗದೇ ಹಲವು ವರ್ಷಗಳಾಗಿವೆ. ಬೇಸಿಗೆಯ ಬಿಸಿಲಿನ ಝಳ ಹೆಚ್ಚಿದ್ದು, ಇಂಥ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಜಿಲ್ಲಾಡಳಿತ ಹಾಗೂ ನಗರಪಾಲಿಕೆ ನಗರದ ಜನತೆಯ ಆರೋಗ್ಯದ ಸ್ವಚ್ಛತೆಯ ದೃಷ್ಟಿಯಿಂದ ಕೂಡಲೇ ಪೌರಕಾರ್ಮಿಕರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ, ನಾಲಾಬೀದಿಯ ರವಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ರಾಧಾಕೃಷ್ಣ, ಎಳನೀರುಕುಮಾರ, ಧನಪಾಲ್, ಪಾಪಣ್ಣಿ ಮತ್ತಿತರರು ಪಾಲಗೊಂಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: