ಮನರಂಜನೆಮೈಸೂರು

200ರೂ. ಕಳುಹಿಸಿದ್ದ ಅಭಿಮಾನಿ ಭರತ್ ರಾಮಸ್ವಾಮಿಯವರನ್ನು ಭೇಟಿಯಾದ ನಿರ್ದೇಶಕ, ನಟ ರಿಷಬ್ ಶೆಟ್ಟಿ

ಮೈಸೂರು,ಫೆ.3:- ಮೈಸೂರಿನಿಂದ ತನಗೆ ಹಣ ಕಳುಹಿಸಿದ್ದ ಅಪರೂಪದ ಅಭಿಮಾನಿಯನ್ನು ನಿರ್ದೇಶಕ, ನಟ ರಿಷಬ್ ಶೆಟ್ಟಿ ಭೇಟಿಯಾಗಿ ಧನ್ಯವಾದ ಹೇಳಿದ್ದಾರೆ.

ಮೈಸೂರಿನ ಅಂಬೇಡ್ಕರ್ ರಸ್ತೆಯಲ್ಲಿ ಭರತ್ ರಾಮಸ್ವಾಮಿ ನಡೆಸುತ್ತಿರುವ ಸಮಾನತೆ ಪ್ರಕಾಶನ ಸಂಸ್ಥೆಗೆ ನಿನ್ನೆ ಭೇಟಿ ನೀಡಿದ ನಿರ್ದೇಶಕ, ನಟ ರಿಷಬ್‌ಶೆಟ್ಟಿ ಪತ್ರ ಹಾಗೂ ಹಣ ಕಳುಹಿಸಿದ್ದಕ್ಕೆ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ ನೋಡಿ 200ರೂ. ಕಳುಹಿಸಿದ್ದ ಅಭಿಮಾನಿ ಭರತ್ ರಾಮಸ್ವಾಮಿಯವರನ್ನು ಭೇಟಿ ಮಾಡಬೇಕು ಅಂತ ಯೋಚಿಸಿದ್ದೆ, ಇಂದು ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಬಂದಿದ್ದೆ ಅವರನ್ನು ಭೇಟಿಯಾದೆ. ಇಂತಹ ಅಭಿಮಾನಿಗಳಿಂದ ಒಳ್ಳೆ ಚಿತ್ರಗಳು ಗೆಲ್ಲುತ್ತವೆ ಎಂದು ಹೇಳಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: