ಮೈಸೂರು

ಬೈಕ್ ನಿಂದ ಆಯತಪ್ಪಿ ಕೆಳಕ್ಕೆ ಬಿದ್ದು ಸವಾರ ಸಾವು

ಮೈಸೂರು,ಫೆ.3:- ಬೈಕ್ ಸವಾರರೋರ್ವರು ಬೈಕ್ ನಿಂದ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಬನ್ನೂರು ಮುಖ್ಯರಸ್ತೆಯಲ್ಲಿ ನಡೆದಿದೆ.

ಮೃತರನ್ನು ಹುರುಳಿ ಕ್ಯಾತನಹಳ್ಳಿಯ ಬಿಳಿಯಯ್ಯ(44) ಎಂದು ಗುರುತಿಸಲಾಗಿದೆ. ಇವರು ಬೈಕ್ ನಲ್ಲಿ ಬನ್ನೂರು ಮುಖ್ಯರಸ್ತೆಯಲ್ಲಿ ಮೈಸೂರು ನಗರದ ಕಡೆಯಿಂದ ಬನ್ನೂರು ಕಡೆಗೆ ಬರುವಾಗ ಜ್ಯೋತಿ ನಿಲಯ ಶಾಲೆ ಬಳಿ ಬೈಕ್ ಸ್ಕಿಡ್ ಆಗಿ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಈ ವೇಳೆ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಚಿಕಿತ್ಸೆಗೆ ಸ್ಪಂದಿಸದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸಿದ್ದಾರ್ಥ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: