ದೇಶಪ್ರಮುಖ ಸುದ್ದಿ

ಉತ್ತರ ಪ್ರದೇಶದ 300ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ; ಸ್ಪಷ್ಟ ಬಹುಮತದತ್ತ ದಾಪುಗಾಲು

ಲಖನೌ : ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಸ್ವಂತ ಬಲದಿಂದ ಅಧಿಕಾರದ ಗದ್ದುಗೆ ಏರುವ ಲಕ್ಷಣಗಳು ಕಾಣುತ್ತಿದ್ದು, ಆಡಳಿತ ವಿರೋಧಿ ಅಲೆಯಲ್ಲಿ ಎಸ್‍ಪಿ ಮತ್ತು ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿವೆ.

404 ಕ್ಷೇತ್ರಗಳ ಪೈಕಿ 305 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಎಸ್‏ಪಿ-ಕಾಂಗ್ರೆಸ್ ಮೈತ್ರಿಕೂಟ 69 ಮತ್ತು ಬಿಎಸ್‍ಪಿ 19 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿವೆ. ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆ ಇದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಬಳಸಿಕೊಂಡು 15 ವರ್ಷಗಳ ನಂತರ ಉತ್ತರ ಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ಏರುವತ್ತ ಹೆಜ್ಜೆ ಇಟ್ಟಿದೆ.

ಗೂಂಡಾ ರಾಜ್ಯವನ್ನು ನೆನಪಿಸುವ ಅತ್ಯಾಚಾರ ಕೊಲೆ ಸುಲಿಗೆಗಳ ಆಡಳಿತ ನೀಡಿದ ಸಮಾಜವಾದಿ ಪಕ್ಷದೊಂದಿಗೆ ಸೇರಿದ ಕಾಂಗ್ರೆಸ್‍ಗೂ ಜನತೆ ಪಾಠ ಕಲಿಸಿದ್ದು, ಕಾಂಗ್ರೆಸ್‍ ಭದ್ರಕೋಟೆಯಾಗಿದ್ದ ರಾಯ್‍ಬರೇಲಿ ಮತ್ತು ಅಮೇಠಿಯಲ್ಲೂ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಸಮಾಜವಾದಿ ಪಕ್ಷದ ಆಡಳಿತ ವಿರೋಧಿ ಅಲೆಯಲ್ಲಿ ನೋಟು ನಿಷೇಧ ವಿಷಯ ನಗಣ್ಯವಾಗಿದ್ದು, ಬಿಜೆಪಿ ಗೆಲುವಿನತ್ತ ದಾಪುಗಾಲು ಹಾಕಿದೆ.

(ಎನ್‍.ಬಿ.ಎನ್)

Leave a Reply

comments

Related Articles

error: