ಮೈಸೂರು

ಕೆ ಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು : ತಿ.ನರಸೀಪುರದ ಬೆನಕನಹಳ್ಳಿಯಲ್ಲಿ ಘಟನೆ

ಮೈಸೂರು,ಫೆ.4:- ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬೆನಕನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮೃತ ಬೈಕ್ ಸವಾರನನ್ನು ಕೆಬ್ಬೆಹುಂಡಿ ಗ್ರಾಮದ ನಿವಾಸಿ ಮನುರಾಜ್ (33) ಎಂದು ಗುರುತಿಸಲಾಗಿದೆ. ಈತ ಮೈಸೂರಿನ ರೇಷ್ಮೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಇಂದು ಬೆಳಿಗ್ಗೆ ಕೆಲಸಕ್ಕೆ ಹೊರಟಾಗ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬೆನಕನಹಳ್ಳಿ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲಿ ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: