ಪ್ರಮುಖ ಸುದ್ದಿ

450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಾಮಗಾರಿ ಆರಂಭ : ಶಾಸಕ ಅಪ್ಪಚ್ಚುರಂಜನ್ ಪರಿಶೀಲನೆ

ರಾಜ್ಯ( ಮಡಿಕೇರಿ) ಫೆ.5 :- ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ನಗರದ ಬೋಧಕ ಆಸ್ಪತ್ರೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಜಿಲ್ಲಾ ಆಸ್ಪತ್ರೆಯ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಸಮತಟ್ಟು ಮಾಡುವ ಕಾರ್ಯ ನಡೆಯುತ್ತಿದ್ದು, ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಸ್ಥಳ ಪರಿಶೀಲನೆ ನಡೆಸಿದರು.
ತ್ವರಿತವಾಗಿ ಜಾಗವನ್ನು ಸಮತಟ್ಟು ಮಾಡಿ ಕಾಮಗಾರಿ ಆರಂಭಿಸುವಂತೆ ಸಂಬಂಧಪಟ್ಟ ಎಂಜಿನಿಯರಿಗಳಿಗೆ ಶಾಸಕರು ನಿರ್ದೇಶನ ನೀಡಿದರು.
ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಿ ಮಳೆಗಾಲ ಆರಂಭವಾಗುವುದರೊಳಗೆ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಂಜಿನಿಯರ್‍ಗಳಿಗೆ ಶಾಸಕರು ಸೂಚಿಸಿದರು.
ಕೊಡಗು ವೈದ್ಯಕೀಯ ಆಸ್ಪತ್ರೆಗೆ ಪಿರಿಯಾಪಟ್ಟಣ, ಹುಣಸೂರು ಹಾಗೂ ಜಿಲ್ಲೆಯಾದ್ಯಂತ ಚಿಕಿತ್ಸೆಗಾಗಿ ಬರುತ್ತಿದ್ದು, ಉತ್ತಮ ಆರೋಗ್ಯ ಸೇವೆ ದೊರೆಯುತ್ತಿದೆ ಎಂದು ವೈದ್ಯಕೀಯ ಕಾಲೇಜಿನ ನಿರ್ದೇಶಕರಾದ ಕಾರ್ಯಪ್ಪ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಫೆ.3 ರಂದು ಒಂದೇ ದಿನದಲ್ಲಿ 950 ಹೊರ ರೋಗಿಗಳ ವಿಭಾಗದಲ್ಲಿ ದಾಖಲಾಗಿದ್ದಾರೆ. ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸೇವೆಯನ್ನು ಸಮರ್ಪಕವಾಗಿ ಒದಗಿಸಲಾಗುತ್ತಿದೆ ಎಂದು ಕಾರ್ಯಪ್ಪ ಅವರು ಹೇಳಿದರು. ವೈದ್ಯಕೀಯ ಕಾಲೇಜಿನ ಅಧೀಕ್ಷಕ ಮೋಹನ್ ಮತ್ತಿತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: