ದೇಶಪ್ರಮುಖ ಸುದ್ದಿ

ರಾಮ ಮಂದಿರ ನಿರ್ಮಾಣಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿ ರಚನೆ: ಮೋದಿ

ನವದೆಹಲಿ,ಫೆ.5-ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಅಧಿವೇಶನ ಉದ್ದೇಶಿಸಿ ಮಾತನಾಡಿದ ಮೋದಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಯೋಜನೆಯೊಂದನ್ನು ಹಮ್ಮಿಕೊಳ್ಳಲಾಗಿದೆ. ಮಂದಿರ ನಿರ್ಮಾಣಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಎಂಬ ಹೆಸರಿನ ಸಮಿತಿಯೊಂದನ್ನು ರಚನೆ ಮಾಡಲಾಗುತ್ತದೆ. ಟ್ರಸ್ಟ್ ರಚನೆ ಕುರಿತು ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿದೆ. ಸಮಿತಿ ರಚನೆಗೊಂಡ ಬಳಿಕ ಭೂಮಿಯನ್ನು ಟ್ರಸ್ಟ್ ಗೆ ನೀಡಲಾಗುತ್ತದೆ ಎಂದಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪಿನಂತೆ ಸುನ್ನಿ ವಕ್ಫ್ ಮಂಡಳಿಗೆ 5 ಎಕರೆ ಭೂಮಿಯನ್ನು ನೀಡಲು ಉತ್ತರ ಪ್ರದೇಶ ಸರ್ಕಾರ ಒಪ್ಪಿಕೊಂಡಿದೆ. (ಎಂ.ಎನ್)

Leave a Reply

comments

Related Articles

error: