ಪ್ರಮುಖ ಸುದ್ದಿ

ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ ಭಾಷೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ : ಸಿಎಂ ಬಿಎಸ್ ಯಡಿಯೂರಪ್ಪ

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ರಾಜ್ಯ(ಕಲಬುರಗಿ)ಫೆ.5:- ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ ಭಾಷೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು.

ಕಲ್ಬುರ್ಗಿ ಜಿಲ್ಲೆ ಗುಲ್ಬರ್ಗ ವಿಶ್ವವಿದ್ಯಾನಿಲಯದ ಆವರಣದಲ್ಲಿ ಇಂದಿನಿಂದ ನಡೆಯುತ್ತಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಈ ವೇಳೆ ಸಮ್ಮೇಳನಾಧ್ಯಕ್ಷರಾದ ಹಿರಿಯ ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ, ಡಿಸಿಎಂ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕಲ್ಬುರ್ಗಿ  ಪುಣ್ಯ ಭೂಮಿ ಧರ್ಮಭೂಮಿ. ಧಾರ್ಮಿಕ ಸಾಂಸ್ಕೃತಿಕ ಪರಂಪರ ಹೊಂದಿದೆ. ಕನ್ನಡದ ಮೊದಲ ಗ್ರಂಥ  ಕವಿರಾಜ ಮಾರ್ಗ. ಮೊದಲ ಕಾನೂನು ಗ್ರಂಥ ಮಿತಾಕ್ಷರ ಈ ಎರಡು ಗ್ರಂಥ್ರ ರಚನೆಯಾಗಿ ಕಲ್ಬುರ್ಗಿ ನೆಲದಲ್ಲೇ ಎಂದು ಶ್ಲಾಘಿಸಿದರು.

ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ ಭಾಷೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸರ್ಕಾರ ಶಾಲೆಗಳ  ಅಭಿವೃದ್ದಿಗೆ ಸರ್ಕಾರ ಕ್ರಮ ಕೈಗೊಂಡಿದೆ. ನೆಲಜಲ ರಕ್ಷಣೆಗೆ ಸರ್ಕಾರ ಸಿದ್ಧವಿದ್ದು,  ಕನ್ನಡ ಭಾಷೆ ಮತ್ತಷ್ಟು ಶ್ರೀಮಂತವಾಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನ ಮಾನ ನೀಡಿದ್ದೇವೆ. ಇದರಿಂದಾಗಿ ಸಾಕಷ್ಟು ಅಭಿವೃದ್ದಿ ಕೆಲಸಗಳಾಗುತ್ತಿವೆ. ಯಾವಭಾಗವೂ ಅಭಿವೃದ್ಧಿಯಿಂದ ಹಿಂದುಳಿಯಬಾರದು ಎಂದು ಸಿಎಂ ಬಿಎಸ್ ವೈ ತಿಳಿಸಿದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: