ದೇಶ

ರಾಸಾಯಾನಿಕ ಕಾರ್ಖಾನೆಯಿಂದ ವಿಷಾನಿಲ ಸೋರಿಕೆ: ಮಕ್ಕಳು ಸೇರಿ 7 ಮಂದಿ ದುರ್ಮರಣ

ಉತ್ತರಪ್ರದೇಶ,ಫೆ.6-ರಾಸಾಯಾನಿಕ ಕಾರ್ಖಾನೆಯಿಂದ ವಿಷ ಅನಿಲ ಸೋರಿಕೆಯಾಗಿ ಮೂವರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಸಿತಾಪುರ್ ಜಿಲ್ಲೆಯಲ್ಲಿ ನಡೆದಿದೆ.

ಬಿಸ್ವಾನ್‌ ನ ರಾಸಾಯನಿಕ ಕಾರ್ಖಾನೆಯ ಪೈಪ್‌ಲೈನ್‌ನಿಂದ ಅನಿಲ ಸೋರಿಕೆಯಾಗಿದೆ. ಇದರಿಂದ ಕಾರ್ಖಾನೆಯೊಳಗೆ ಮಲಗಿದ್ದವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಸ್ಥಳೀಯರು ಅನಿಲ ಸೋರಿಕೆಯಾಗುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ಆದರೆ ತೀವ್ರ ವಾಸನೆಯಿಂದ ಪೊಲೀಸರು ತಕ್ಷಣ ಕಾರ್ಖಾನೆಯೊಳಗೆ ಪ್ರವೇಶಿಸಲು ಸಾಧ್ಯವಾಗಿಲ್ಲ. ಪೊಲೀಸರು ಕೂಡಲೇ ಆಸುಪಾಸಿನಲ್ಲಿ ವಾಸಿಸುತ್ತಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಕಾರ್ಖಾನೆಯೊಳಗೆ ಮೃತಪಟ್ಟಿದ್ದ ಏಳು ಮಂದಿಯ ಮೃತದೇಹವನ್ನು ಹೊರ ತೆಗೆಯಲಾಯಿತು ಸಿತಾಪುರ್ ಎಸ್ಪಿ ಎಲ್.ಆರ್.ಕುಮಾರ್ ತಿಳಿಸಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಘಟನೆಯ ಕುರಿತು ಸಂತಾಪ ಸೂಚಿಸಿದ್ದು ಅಧಿಕಾರಿಗಳಿಗೆ ಸಮಗ್ರ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ 4 ಲಕ್ಷ ಪರಿಹಾರ ನೀಡುತ್ತೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. (ಎಂ.ಎನ್)

 

Leave a Reply

comments

Related Articles

error: