ಮೈಸೂರು

ಹನಿಟ್ರ್ಯಾಪ್ ಪ್ರಕರಣ ಭೇದಿಸಿದ ಸಿಸಿಬಿ ಪೊಲೀಸರು : ಆರು ಮಂದಿ ಬಂಧನ

ಮೈಸೂರು ಸಿ.ಸಿ.ಬಿ ಪೊಲೀಸರು ಯಶಸ್ವೀ ಕಾರ್ಯಾಚರಣೆ ನಡೆಸುವ ಮೂಲಕ ಹನಿಟ್ರ್ಯಾಪ್ ಪ್ರಕರಣವನ್ನು ಭೇದಿಸಿದ್ದು, ಆರುಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದರು.

ಮೈಸೂರಿನಲ್ಲಿ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಂಧಿತರನ್ನು ಚಿಕ್ಕಮಗಳೂರಿನ ಶಂಕರಪುರದ ಯೂಸೂಫ್, ಕಣ್ಣೂರಿನ ಲತೀಪ್, ಕಣ್ಣೂರಿನ ತಲಚೇರಿಯ ನೌಶಾದ್, ಮುಡಿಕಂಚೇರಿಯ ರಶೀದ್, ಮೈಸೂರಿನ ಉದಯಗಿರಿಯ ಹೀನಾ, ವಿರಾಜಪೇಟೆ ಹುದಿಕೇರಿಯ ಅನಿತ ಎಂದು ಗುರುತಿಸಲಾಗಿದೆ ಎಂದರು.

ಇವರು ಮೈಸೂರಿನಲ್ಲಿ ಹೋಟೆಲ್ ನಲ್ಲಿ ಉಳಿದುಕೊಂಡಿದ್ದ ಕೇರಳ ಮೂಲದ  ನಿಝಾರ್ ಎಂಬ ವ್ಯಕ್ತಿಯನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿಕೊಂಡು ಬ್ಲಾಕ್ ಮೇಲ್ ಮಾಡಿ 25ಲಕ್ಷರೂ.ಗೆ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ  ನಿಝಾರ್ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹೀನಾ ಮತ್ತು ಅನಿತಾರ ಜೊತೆ ನಿಝಾರ್ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡ ಆರೋಪಿಗಳು  25ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು.ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆಯೊಡ್ಡಿರುವುದಾಗಿ  ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ ಎಂದರು. ದೂರಿನ ಹಿನ್ನೆಲೆಯಲ್ಲಿ ಸಿಸಿಬಿ ಇನ್ಸಪೆಕ್ಟರ್ ಪ್ರಸನ್ನ ಕುಮಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಕೊನೆಗೂ ಪೊಲೀಸರು ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಶೇಖರ್, ರುದ್ರಮುನಿ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: