ಕರ್ನಾಟಕಪ್ರಮುಖ ಸುದ್ದಿ

ಉತ್ತರ ಪ್ರದೇಶದ ಫಲಿತಾಂಶಕ್ಕೂ ರಾಜ್ಯಕ್ಕೂ ಸಂಬಂಧವಿಲ್ಲ : ದಿನೇಶ್ ಗುಂಡುರಾವ್

ಬೆಂಗಳೂರು: ಪ್ರತಿಯೊಂದು ರಾಜ್ಯದಲ್ಲಿ ತನ್ನದೇ ಆದ ಪ್ರಾದೇಶಿಕ ವಿಚಾರದ ಮೇಲೆ ಚುನಾವಣೆ ನಡೆಯುತ್ತದೆ. ಎಲ್ಲ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಒಂದೇ ಮಾನದಂಡ ಅನುಸರಿಸಿ ಮಾತನಾಡುವುದು ಸಾಧ್ಯವಿಲ್ಲ ಎಂದು ರಾಜ್ಯ ಕಾಂಗ್ರೆ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ನಮ್ಮ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ. ಈ ಆಧಾರದ ಮೇಲೆ ಮುಂದಿನ ಚುನಾವಣೆ ಎದುರಿಸುತ್ತೇವೆ. ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಉತ್ತರ ಪ್ರದೇಶದ ಫಲಿತಾಂಶಕ್ಕೂ ರಾಜ್ಯದ ಚುನಾವಣೆಗೂ ಸಂಬಂಧ ಇಲ್ಲ ಎಂದು ಗುಂಡೂರಾವ್ ಅಭಿಪ್ರಾಯಪಟ್ಟರು.

ಉಪಚುನಾವಣೆಯಲ್ಲಿ ನಮ್ಮದೇ ಗೆಲುವು :

ಉಪಚುನಾವಣೆ ನಡೆಯುವ ಎರಡೂ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ. ಎಲ್ಲ ರೀತಿಯ ತಯಾರಿ ನಡೆಸಿದೆ. ಎರಡೂ ಕ್ಷೇತದಲ್ಲಿ ಅಭ್ಯರ್ಥಿಗಳು ಬಲಿಷ್ಠರಿದ್ದಾರೆ.

ನಾಳೆ ಸಿಎಂ ನೇತ್ರತ್ವದಲ್ಲಿ ಸಭೆ ನಡೆಯಲಿದೆ. ಮುಂದಿನ ಸಾರ್ವತ್ರಿಕ ಚುನಾವಣೆಗೂ ನಮ್ಮದೇ ಆದಂತಹ ಕಾರ್ಯತಂತ್ರ ರೂಪಿಸುತ್ತಿದ್ದೇವೆ ಎಂದರು.

(ಎಸ್‍.ಎನ್‍/ಎನ್‍.ಬಿಎನ್‍)

Leave a Reply

comments

Related Articles

error: