ಮೈಸೂರು

ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಮೇಲೆ ಕ್ರಮಕ್ಕೆ ಒತ್ತಾಯಿಸಿ ಮನವಿ

ಮೈಸೂರು,ಫೆ.10:- ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ಸಂಸದ   ಅನಂತ ಕುಮಾರ್ ಹೆಗಡೆ ಅವರು ಮಹಾತ್ಮ ಗಾಂಧಿಯವರನ್ನು ಅವಮಾನಿಸಿದ್ದು, ಅವರ ನೇತೃತ್ವದ ಸ್ವಾತಂತ್ರ್ಯ ಹೋರಾಟವನ್ನು “ನಾಟಕ” ಎಂದು ಕರೆದಿದ್ದಾರೆ.   ಬೆಂಗಳೂರಿನಲ್ಲಿ ಫೆ.3ರಂದು ನಡೆದ ಸಾರ್ವಜನಿಕ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು ಈ ರೀತಿ ಹೇಳಿಕೆ ನೀಡುವ ಮೂಲಕ   ದೇಶ ಮತ್ತು ಮಹಾತ್ಮರ ವಿಷಯವಾಗಿ ಕರ್ನಾಟಕದಲ್ಲಿ ಅನಗತ್ಯ ಅಶಾಂತಿಯನ್ನು ಸೃಷ್ಟಿಸಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ  ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ದೂರು ಸಲ್ಲಿಸಿದೆ. ದೂರಿನಲ್ಲಿ  ಮಹಾತ್ಮ ಗಾಂಧಿಯನ್ನು ನಿಂದನೆ ಮಾಡಲಾಗಿದ್ದು,  ಇದು ಸಾರ್ವಜನಿಕರ ಹಿತದೃಷ್ಟಿಯಿಂದ ಒಳ್ಳೆಯದಲ್ಲ.  ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ  ಅನರ್ಹಗೊಳಿಸಬೇಕು ಮತ್ತು ಗೂಂಡಾ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಈ ದೇಶವನ್ನು ಉಳಿಸಬೇಕು ಎಂದಿ ಒತ್ತಾಯಿಸಿದ್ದಾರೆ.

ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಸೇರಿದಂತೆ ಹಲವರು ನಿಯೋಗದಲ್ಲಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: