ಮೈಸೂರು

ಶ್ರೀನಿವಾಸ್ ಪ್ರಸಾದ್ ರನ್ನು ಭೇಟಿಯಾದ ಮಾಜಿ ಸಚಿವ ಸೋಮಣ್ಣ

ನಂಜನಗೂಡು ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಶತಾಯ, ಗತಾಯ ಬಿಜೆಪಿ ಗೆಲ್ಲಲೇಬೇಕು ಎಂದು ಪಣ ತೊಟ್ಟಿದೆ. ಅದರಿಂದ ಬಿಜೆಪಿಯ ಪ್ರಮುಖ ನಾಯಕರು ನಂಜನಗೂಡು, ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಶನಿವಾರ ಮಾಜಿ ಸಚಿವ ಸೋಮಣ್ಣ ಬಿಜೆಪಿ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿದರು.

ನಂಜನಗೂಡು ಚುನಾವಣೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ವಿ.ಸೋಮಣ್ಣ  ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಬಿ.ಎಸ್.ಯಡಿಯೂರಪ್ಪನವರು ಭಾನುವಾರ  ನಂಜನಗೂಡಿನಲ್ಲಿ ಪ್ರವಾಸ ಮಾಡುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವವನ್ನು ಪಡೆದುಕೊಂಡಿದೆ. ಮಾತ್ರವಲ್ಲ, ನಂಜನಗೂಡು ಕ್ಷೇತ್ರವನ್ನ ಬಿಜೆಪಿ ತೆಕ್ಕೆಗೆ ಪಡೆಯಲೇಬೇಕೆಂಬ ಪಣವನ್ನು ತೊಟ್ಟಿರುವ  ಘಟಾನುಘಟಿ ನಾಯಕರು ಇದೀಗ ಮೈಸೂರಿನ ನಂಜನಗೂಡಿಗೆ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: