
ಮೈಸೂರು
ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಯವರನ್ನು ರೌಡಿ ಲಿಸ್ಟ್ ಗೆ ಸೇರಿಸುವಂತೆ ದೂರು
ಮೈಸೂರು,ಫೆ.11:- ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಯವರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ರೌಡಿ ಲಿಸ್ಟ್ ಗೆ ಸೇರಿಸುವಂತೆ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಮೈಸೂರು ಕಾಂಗ್ರೆಸ್ ವತಿಯಿಂದ ದೂರು ನೀಡಲಾಯಿತು.
ನಿನ್ನೆ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರು ಗಾಂಧೀಜಿ ಅವರ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ. ವೋಟಿಗಾಗಿ ಸಿದ್ದರಾಮಯ್ಯ ಬೂಟ್ ನೆಕ್ಕುತ್ತಾರೆ ಹೀಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಂತಹ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಆಯುಕ್ತ ಡಾ.ಚಂದ್ರ ಗುಪ್ತ ಅವರಿಗೆ ದೂರು ನೀಡಿದರು. ಈ ಸಂದರ್ಭ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)