ಕರ್ನಾಟಕ

ಉಡುಪಿಯ ಶ್ರೀ ಕೃಷ್ಣ ಮಠದ ಮಧ್ವ ಸರೋವರದಲ್ಲಿ ಮುಳುಗಿ ವ್ಯಕ್ತಿ ಸಾವು

ಉಡುಪಿ,ಫೆ.11-ಚೆನ್ನೈ ಮೂಲದ ವ್ಯಕ್ತಿಯೊಬ್ಬರು ಶ್ರೀ ಕೃಷ್ಣ ಮಠದ ಮಧ್ವ ಸರೋವರದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.

ಚೆನ್ನೈನ ಕ್ಯಾ.ಶ್ರೀಧರ ಪಾಲನ (62) ಮೃತಪಟ್ಟವರು. ದೇವರ ದರ್ಶನಕ್ಕೆ ಬಂದಿದ್ದ ಇವರು, ಮಧ್ವ ಸರೋವರದಲ್ಲಿ ಸ್ನಾನ ಮಾಡುವ ವೇಳೆ ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹವನ್ನು ಅಜ್ಜರಕಾಡು ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಂ.ಎನ್)

Leave a Reply

comments

Related Articles

error: