ಮೈಸೂರು

ಹನೂರು ಕ್ಷೇತ್ರದಿಂದಲೇ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸೋಮಣ್ಣ

ಚಾಮರಾಜ ನಗರದ ಹನೂರು ಕ್ಷೇತ್ರದಿಂದಲೇ ಸ್ಪರ್ಧಿಸುವ ಇಂಗಿತವನ್ನು ಮಾಜಿ ಸಚಿವ ವಿ.ಸೋಮಣ್ಣ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ನನ್ನ ಬಯಕೆಯನ್ನು ನಾನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುವುದು ಅವರಿಗೆ ಬಿಟ್ಟದ್ದು ಎಂದರು. ಪರಿಮಳ ನಾಗಪ್ಪ ಬಿಜೆಪಿ ಸೇರುತ್ತಾರಂತೆ ಎಂದು ಹೇಳಿದಾಗ ಪರಿಮಳ ನಾಗಪ್ಪ ಯಾವುದೇ ಷರತ್ತು ಇಲ್ಲದೆ ಪಕ್ಷಕ್ಕೆ ಬರಲಿ.ಅವರಂತವರು, ನನ್ನಂತವರು ಪಕ್ಷಕ್ಕೆ ನೂರಾರು ಜನರು ಬರುತ್ತಾರೆ, ಹೋಗುತ್ತಾರೆ. ಆದರೆ ಅವರು ಟಿಕೆಟ್ ನೀಡಿದರೆ ಮಾತ್ರ ಪಕ್ಷಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ. ಇಂತಹ ಹೇಳಿಕೆಗಳು ಸರಿಯಲ್ಲ. ಪರಿಮಳ ನಾಗಪ್ಪ ಆಗಮನಕ್ಕೆ‌ ಆಂತರಿಕ ವಿರೋಧವೇನೂ ಇಲ್ಲ. ಆದರೆ ಅವರು ಯಾವುದೇ ಷರತ್ತು ಇಲ್ಲದೆ ಬಿಜೆಪಿಗೆ ಬರಬೇಕು ಎಂದಿದ್ದಾರೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: