ಮೈಸೂರು

ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿಯ ಕಾಲಿನ ಮೇಲೆ ಹರಿದ ಬಸ್ ಚಕ್ರ : ಗಾಯ

ಮೈಸೂರು,ಫೆ.13:- ಗದ್ದಿಗೆ ಮುಖ್ಯ ರಸ್ತೆಯಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿಯ ಕಾಲಿನ ಮೇಲೆ ಬಸ್ ಚಕ್ರ ಹರಿದ ಪರಿಣಾಮ ಗಾಯಗೊಂಡಿದ್ದಾನೆ.

ಗಾಯಗೊಂಡ ವಿದ್ಯಾರ್ಥಿಯನ್ನು ಮಹಾರಾಜ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ ಕಿರಣ್ ಎಂದು ಗುರುತಿಸಲಾಗಿದೆ. ಕಾಲೇಜಿಗೆ ತೆರಳಲು ಈತ ಬಸ್ ಹತ್ತಲು ಮುಂದಾಗಿದ್ದು ಈ ವೇಳೆ ಬಸ್ ಏಕಾಏಕಿ ಚಲಿಸಿದೆ. ಕಿರಣ್ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಸ್ ನ ಹಿಂಬದಿಯ ಚಕ್ರ ಈತನ ಕಾಲಿನ ಮೇಲೆ ಹರಿದಿದ್ದು, ಘಟನೆ ನಡೆದ ಸ್ಥಳದಲ್ಲಿಯೇ ವಿದ್ಯಾರ್ಥಿಗಳು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಪರಿಹಾರಕ್ಕಾಗಿ ಆಗ್ರಹಿಸಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಕೆ.ಆರ್.ಸಂಚಾರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಮಡಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗಾಯಾಳುವಿಕೆ ಚಿಕಿತ್ಸೆ ಕೊಡಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: