ಮೈಸೂರು

ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಮೈಸೂರು ಹೋರಾಟಗಾರರ ಸಮಿತಿ ವತಿಯಿಂದ ಸಾಂಕೇತಿಕ ಪ್ರತಿಭಟನೆ

ಮೈಸೂರು,ಫೆ.13:- ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಮೈಸೂರು ಹೋರಾಟಗಾರರ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಇಂದು ಸಾಂಕೇತಿಕ ಪ್ರತಿಭಟನೆ ನಡೆಯಿತು.

ನಗರದ ಹೋರಾಟಗಾರರು, ಸಾಹಿತಿಗಳು, ಪ್ರಗತಿಪರರು ಡಾ.ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಕಾರ್ಯರೂಪಕ್ಕೆ ತರುವ ಮೂಲಕ ಸಮಸ್ತ ಕನ್ನಡಿಗರಿಗೆ ನ್ಯಾಯವನ್ನು ಒದಗಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಹೋರಾಟಗಾರರು ಹಲವಾರು ವರ್ಷಗಳಿಂದಲೂ ಕೇಮದ್ರ ಸರ್ಕಾರದಿಂದ ಉದ್ಯೋಗ ವಂಚಿತರಾಗುತ್ತಿರುವ ಕನ್ನಡಿಗರಿಗೆ ಉದ್ಯೋಗವನ್ನು ಕಲ್ಪಿಸಬೇಕು. ರಾಜ್ಯ ಸರ್ಕಾರದ ಎಲ್ಲಾ ವಲಯ ಕಛೇರಿಗಳಲ್ಲಿ ಮತ್ತು ಬ್ಯಾಂಕ್ ಹಾಗೂ ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು.ಭಾರತೀಯ ರೈಲ್ವೆಯಲ್ಲಿ ಉತ್ತರ ಭಾರತದವರಿಗೆ ಹೆಚ್ಚಿನ ಉದ್ಯೋಗಾವಕಾಶ ನೀಡುತ್ತಿದ್ದು, ಕೂಡಲೇ ನಮ್ಮ ಸಂಸದರು ಎಚ್ಚೆತ್ತು ಕೇಂದ್ರ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟ ಅನೇಕ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶದ ಒತ್ತಡ ಹೇರಬೇಕು. ಬೇರೆ ರಾಜ್ಯಗಳಲ್ಲಿ ಆ ರಾಜ್ಯಗಳ ಸ್ಥಳೀಯರಿಗೆ ಮೊದಲ ಆದ್ಯತೆಯನ್ನು ನೀಡಿದರೆ ನಮ್ಮ ರಾಜ್ಯದಲ್ಲಿ ವ್ಯತಿರಿಕ್ತವಾಗಿರುವ ಸ್ಥಳೀಯರನ್ನು ಮರೆತಿರುವುದು ನಾಚಿಕೆಗೇಡಿನ ಸಂಗತಿ. ಇದುವರೆಗೂ ಕರ್ನಾಟಕದ ಇತಿಹಾಸದಲ್ಲಿ ಎಷ್ಟು ರಾಜಕೀಯ ಪಕ್ಷಗಳು ರಾಜ್ಯದಲ್ಲೇ ಆಡಳಿತ ನಡೆಸಿವೆ. ಅವೆಲ್ಲವೂ ತಮ್ಮ ಹಾಗೂ ತಮ್ಮ ಪಕ್ಷಗಳಿಗೆ ಲಾಭ ಮಾಡಿಕೊಂಡಿವೆಯೇ ಹೊರತು ಇದರಿಂದ ಕನ್ನಡಿಗರಿಗೆ ಕಿಂಚಿತ್ತೂ ಉಪಕಾರವಾಗಿಲ್ಲ. ಈ ಹಿನ್ನೆಲೆಯಲ್ಲಿ ಇವೆಲ್ಲಕ್ಕೂ ಪರಿಹಾರ, ನ್ಯಾಯ ಸಿಗಬೇಕಾದರೆ ರಾಜ್ಯ ಸರ್ಕಾರ ಕೂಡಲೇ ಡಾ.ಸರೋಜಿನಿ ಮಹಿಷಿ ವರದಿಯನ್ನು ಅನುಷ್ಠಾನಗೊಳಿಸುವ ಮೂಲಕ ಸಮಸ್ತ ಕನ್ನಡಿಗರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: