ಮೈಸೂರು

ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮುಖಾಮುಖಿ : ಇಬ್ಬರ ದುರ್ಮರಣ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ  ಸೇರಿದ ಬಸ್ಸೊಂದು  ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಬೆಂಗಳೂರು ನಿವಾಸಿಗಳಾದ ಲಿಂಗೇಶ್ (37) ,ಕಿರಣ್ (11) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಚಾಲಕ ರಾಹುಲ್ ಸೇರಿದಂತೆ ಇನ್ನಿಬ್ಬರಿಗೆ ಗಾಯವಾಗಿದೆ. ಮಂಡ್ಯಜಿಲ್ಲೆಯ ಶ್ರೀರಂಗಪಟ್ಟಣದ ಚೆಕ್ ಪೋಸ್ಟ್ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ  ಅಸ್ಥಿ ವಿಸರ್ಜಸಿ ವಾಪಸ್ಸು ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವವರನ್ನು ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಶ್ರೀರಂಗಪಟ್ಟಣ ಟೌನ್  ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

 

Leave a Reply

comments

Related Articles

error: