ಕರ್ನಾಟಕಪ್ರಮುಖ ಸುದ್ದಿ

ಹೊಸಪೇಟೆಯ ಕಾರು ಅಪಘಾತ ಪ್ರಕರಣ: ಪೊಲೀಸರಿಂದ ಸಚಿವನ ಮಗನ ರಕ್ಷಣೆ?

ಹೊಸಪೇಟೆ,ಫೆ.13- ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಿನ್ನೆ ಸಂಜೆ ನಡೆದ ಕಾರು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಪ್ರಕರಣದಲ್ಲಿ ಸಚಿವರೊಬ್ಬರ ಪುತ್ರನ ಹೆಸರು ಕೇಳಿಬರುತ್ತಿದೆ.

ಕಾರನ್ನು ಸಚಿವರ ಪುತ್ರ ಚಲಾಯಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತ ನಡೆದ ಬಳಿಕ ಸಚಿವರ ಪುತ್ರ ಬೇರೆ ಕಾರಿನಲ್ಲಿ ಅಲ್ಲಿಂದ ನಿರ್ಗಮಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ವರದಿಯಾಗಿವೆ. ಆದರೆ ಪೊಲೀಸರು ರಾಹುಲ್ ಎಂಬಾತನ ಹೆಸರಿನಲ್ಲಿ ಪ್ರಕರಣ ದಾಖಲಿಸಿಕೊಂಡು ನೈಜ ಆರೋಪಿಯನ್ನು ರಕ್ಷಣೆ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಹೊಸಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅದರಲ್ಲಿ ರಾಹುಲ್ ಎಂಬಾತ ಕಾರು ಚಲಾಯಿಸಿದ್ದಾಗಿ ಉಲ್ಲೇಖಿಸಿದ್ದಾರೆ. ಅತೀ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರವಿ ನಾಯ್ಕ್ ಎಂಬಾತ ಮೃತಪಟ್ಟಿದ್ದು, ರಾಕೇಶ್, ಶಿವಕುಮಾರ್ ಹಾಗೂ ವರುಣ್‌ಗೂ ಗಾಯವಾಗಿದೆ. ಘಟನೆಗೆ ಕಾರಣವಾದ ಕಾರು ಚಾಲಕ ರಾಹುಲ್ ವಿರುದ್ಧ ಹೊಸಪೇಟೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಳ್ಳಲಾಗುವುದು ಎಂದು ಉಲ್ಲೇಖಿಸಲಾಗಿದೆ.

ಹಂಪಿಯಿಂದ ಬೆಂಗಳೂರಿಗೆ ಬರುತ್ತಿದ್ದ (ಕೆ.ಎ 5 ಎಂಡಬ್ಲೂ 0357) ಕಾರು ವೇಗವಾಗಿ ಬಂದು ರಸ್ತೆ ಬದಿಯ ಚಹಾದಂಗಡಿಯಲ್ಲಿ ನಿಂತಿದ್ದ ಮರಿಯಮ್ಮನಹಳ್ಳಿ ತಾಂಡಾದ ರವಿ ನಾಯ್ಕ(18) ಎಂಬುವವರಿಗೆ ಡಿಕ್ಕಿ ಹೊಡೆದಿತ್ತು.
ರವಿ ನಾಯ್ಕ್ ಸ್ಥಳದಲ್ಲಿ ಮೃತಪಟ್ಟರೆ ಕಾರಿನಲ್ಲಿದ್ದ ಸಚಿನ್ (27) ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸಿಪಿಐ ಎಚ್‌.ಶೇಖರಪ್ಪ, ಚಾಲಕ ಸೇರಿದಂತೆ ಒಟ್ಟು ಐವರು ಯುವಕರು ಕಾರಿನಲ್ಲಿದ್ದರು. ಅವರೆಲ್ಲರೂ ಬೆಂಗಳೂರಿನವರು ಎಂದು ಗೊತ್ತಾಗಿದೆ. ಆದರೆ, ಸಚಿವರೊಬ್ಬರ ಮಗನೇ ಕಾರು ಓಡಿಸುತ್ತಿದ್ದರೆ ಎಂಬುದು ಖಚಿತವಾಗಿಲ್ಲ. ತನಿಖೆ ನಡೆಯುತ್ತಿದೆ. ಯಾರೇ ತಪ್ಪು ಮಾಡಿದ್ದರೂ ಮುಲಾಜಿಲ್ಲದೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಶಾಲೆಯ ಹೆಸರಲ್ಲಿ ಕಾರು: ಕಾರು ಬೆಂಗಳೂರಿನ ಕೆಂಗೇರಿಯಲ್ಲಿರುವ ನ್ಯಾಷನಲ್‌ ಪಬ್ಲಿಕ್‌ ಶಾಲೆಯ ಹೆಸರಿನಲ್ಲಿದೆ ಎಂದು ಗೊತ್ತಾಗಿದೆ. ಅದನ್ನು ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿ ದೃಢಪಡಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: