ಕರ್ನಾಟಕ

ಫರ್ನೀಚರ್ ತುಂಬಿದ್ದ ಗೋದಾಮಿನಲ್ಲಿ ಅಗ್ನಿ ಅವಘಡ

ಬೆಂಗಳೂರು,ಫೆ.14- ಫರ್ನೀಚರ್​ ತುಂಬಿದ್ದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಇಲ್ಲಿನ ಹೆಗಡೆ ನಗರದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಘಟನೆ ಸಂಭವಿಸಿದ ವೇಳೆ 12 ಮಂದಿ ಕೆಲಸಗಾರರು ಗೋದಾಮಿನಲ್ಲಿ ಮಲಗಿದ್ದರು ಎನ್ನಲಾಗಿದೆ. ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಕೂಡಲೇ ಗೋದಾಮಿನಿಂದ ಹೊರಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಸುಮಾರು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಪಿಗೆಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗೋದಾಮಿನ ಮಾಲೀಕ ಕಬೀರ್ ಮಾತನಾಡಿ, ಗೋದಾಮಿಗೆ ಬೆಂಕಿ ಬಿದ್ದಿದೆ ಅಂತ ನಮ್ಮ ಹುಡುಗರು ಕರೆ ಮಾಡಿ ಹೇಳಿದರು. ಕೂಡಲೇ ನಾನು ಸ್ಥಳಕ್ಕೆ ಬಂದೆ. ಯಾರೋ ಕಸಕ್ಕೆ ಬೆಂಕಿ ಹಾಕಿದ್ದಾರೆ. ಇದರಿಂದಲೇ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದೆ. ಗೋದಾಮಿನ ಖಾಲಿ ಜಾಗದಲ್ಲಿ ಚಿಕ್ಕ ಹುಡುಗರು ಬಂದು ಗಾಂಜಾ, ಸಿಗರೇಟ್ ಸೇದುತ್ತಾರೆ. ಇದರಿಂದಲೇ ಬೆಂಕಿ ಬಿದ್ದಿರುವ ಸಾಧ್ಯತೆ ಇದೆ. ಸುಮಾರು 2 ಲಕ್ಷ ರೂ. ಮೌಲ್ಯದ ಫರ್ನಿಚರ್ ಸುಟ್ಟು ಹೋಗಿವೆ ಎಂದು ಹೇಳಿದರು. (ಎಂ.ಎನ್)

Leave a Reply

comments

Related Articles

error: