ಮೈಸೂರು

ತೇರಾಪಂಥ ವತಿಯಿಂದ ಸ್ವಚ್ಛ ಭಾರತ ಅಭಿಯಾನ

ಮೈಸೂರಿನ ಮಹಾತ್ಮಾಗಾಂಧಿ ರಸ್ತೆಯಲ್ಲಿರುವ ತೇರಾಪಂಥ ಸಂಸ್ಥೆಯ ವತಿಯಿಂದ ಸ್ವಚ್ಛಭಾರತ ಕುರಿತ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಸ್ವಚ್ಛ ಭಾರತ ಅಭಿಯಾನಕ್ಕೆ ಪಾಲಿಕೆಯ ಮಹಾಪೌರ  ಎಂ.ಜೆ.ರವಿಕುಮಾರ್  ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮೈಸೂರು ಈಗಾಗಲೇ ಸ್ವಚ್ಛ ನಗರವಾಗಿ ಗುರುತಿಸಿಕೊಂಡಿದೆ. ಇದನ್ನು ಹಾಗೆಯೇ ಕಾಯ್ದುಕೊಂಡು ಹೋಗುವ ಜವಾಬ್ದಾರಿ ನಮ್ಮೆಲರ ಮೇಲಿದೆ. ಎಲ್ಲರೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.

ಅಭಿಯಾನದಲ್ಲಿ ಐವತ್ತಕ್ಕೂ ಅಧಿಕ ಪುಟಾಣಿಗಳು ಸೇರಿದಂತೆ ಸಂಸ್ಥೆಯ ಸದಸ್ಯರು ಪಾಲ್ಗೊಂಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: