ಮೈಸೂರು

ನಕಲಿ ವೈದ್ಯರಿಬ್ಬರ ಬಂಧನ : ಕ್ಲಿನಿಕ್ ಗೆ ಬೀಗ ಜಡಿದ ಮೈಸೂರು ಜಿಲ್ಲಾ ಆರೋಗ್ಯ ಇಲಾಖೆ

ಮೈಸೂರು,ಫೆ.14:- ವೈದ್ಯಕೀಯ ವ್ಯಾಸಂಗದ ಯಾವುದೇ ದಾಖಲಾತಿ ನೀಡದ ವೈದ್ಯರಿಬ್ಬರ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಜಿಲ್ಲಾ ಆರೋಗ್ಯ ಇಲಾಖೆ ನಕಲಿ ವೈದ್ಯರಿಬ್ಬರು ನಡೆಸುತ್ತಿದ್ದ ಕ್ಲಿನಿಕ್ ಗೆ ಬೀಗ ಜಡಿದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ಇಲವಾಲದಲ್ಲಿ ಚಾಮುಂಡೇಶ್ವರಿ ಕ್ಲಿನಿಕ್ ನಡೆಸುತ್ತಿದ್ದ ದೇವೇಂದ್ರಪ್ಪ ಹಾಗೂ ದಿವ್ಯಶ್ರೀ ಹೆಲ್ತ್ ಕೇರ್ ಸೆಂಟರ್ ನಡೆಸುತ್ತಿದ್ದ ವಜಯ್ ಕುಮಾರ್ ವಿರುದ್ಧ ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾರ್ವಜನಿಕರ ದೂರಿನನ್ವಯ ಈ ಕ್ಲಿನಿಕ್ ಗೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ಈ ಸಂದರ್ಭ ವ್ಯದ್ಯಕೀಯ ವ್ಯಾಸಂಗ ನಡೆಸಿದ್ದಕ್ಕೆ ಸಂಬಂಧಿಸಿದ ಯಾವೊಂದು ದಾಖಲೆಯನ್ನೂ ಈ ಇಬ್ಬರು ನೀಡದ ಕಾರಣ ಇವರಿಬ್ಬರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ವೈದ್ಯಕೀಯ ಪ್ರಮಾಣಪತ್ರವಿಲ್ಲದೇ ಕ್ಲಿನಿಕ್ ನಡೆಸುತ್ತಿದ್ದಾರೆಂಬ ದೂರು ಬಂದ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಮತ್ತು ದೇವೇಂದ್ರಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: