ಪ್ರಮುಖ ಸುದ್ದಿ

ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗದಿಂದ ಆಗ್ರಹ : ಕಳೆದ ಬಜೆಟ್ ನ ಘೋಷಣೆಯ ನಿಯಮಗಳು ಸಮರ್ಪಕವಾಗಿಲ್ಲ

ಸರ್ಕಾರಿ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ನೀಡುವಂತೆ ಡಿಸಿಎಂ ಗೆ ಮನವಿ

ರಾಜ್ಯ( ಮಡಿಕೇರಿ)ಫೆ.15: – ಕರ್ನಾಟಕ ಬೆಳೆಗಾರರ ಒಕ್ಕೂಟದ ಮಾಜಿ ಅಧ್ಯಕ್ಷ ಬಿ.ಎಸ್.ಜೈರಾಂ ನೇತೃತ್ವದಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಡಾ. ಅಶ್ವಥ ನಾರಾಯಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

2017-18 ರ ಬಜೆಟ್ ನಲ್ಲಿ ಸರ್ಕಾರಿ ಭೂಮಿಯನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ರೂಪುಗೊಂಡ ಕರುಡು ನಿಯಮಗಳು ಬೆಳೆಗಾರರ ಪರವಾಗಿ ಇಲ್ಲ. ಎಲ್ಲಾ ಬೆಳೆಗಾರರ ಹಿತದೃಷ್ಟಿಯಿಂದ ಕರ್ನಾಟಕ ಬೆಳೆಗಾರರ ಒಕ್ಕೂಟದ ಸಲಹೆಗಳನ್ನು ಪರಿಗಣಿಸಿ, ಸರ್ಕಾರಿ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಬೆಳೆಗಾರರಿಗೆ ನೀಡಬೇಕೆಂದು ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಬೋಜೇಗೌಡ, ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಇದ್ದರು. ಬೆಳೆಗಾರರ ಒಕ್ಕೂಟದ ಮನವಿ ಸ್ವೀಕರಿಸಿದ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ.ತೀರ್ಥಮಲ್ಲೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: