
ಪ್ರಮುಖ ಸುದ್ದಿಮೈಸೂರು
ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ : ಹೂಟಗಳ್ಳಿಯ 23 ಮಂದಿ ಅಯ್ಯಪ್ಪ ಭಕ್ತರು ಅಪಾಯದಿಂದ ಪಾರು
ಮೈಸೂರು/ಕೇರಳ,ಫೆ.15:- ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬಸ್ ನಲ್ಲಿದ್ದ ಮೈಸೂರಿನ ಹೂಟಗಳ್ಳಿಯ 23 ಮಂದಿ ಅಯ್ಯಪ್ಪ ಭಕ್ತರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಕರ್ನಾಟಕದಿಂದ ಶಬರಿ ಮಲೆಗೆ ತೆರಳಿದ್ದ 35ಕ್ಕೂ ಹೆಚ್ಚು ಮಂದಿ ಬಸ್ ನಲ್ಲಿದ್ದರು ಎನ್ನಲಾಗಿದ್ದು, ನಿನ್ನೆ ಸಂಜೆ 7.45ರ ವೇಳೆ ಘಟನೆ ನಡೆದಿದೆ. ನೆಲಕ್ಕಲ್ ನಿಂದ ಪಂಪಾಗೆ ಕೇರಳ ಸರ್ಕಾರಿ ಬಸ್ ನಲ್ಲಿ ತೆರಳುವಾಗ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಅಯ್ಯಪ್ಪ ಭಕ್ತರು ಪಾರಾಗಿದ್ದಾರೆ. ಬಸ್ ನಲ್ಲಿ ಮೈಸೂರಿನ ಹೂಟಗಳ್ಳಿಯ 23 ಮಂದಿ ಅಯ್ಯಪ್ಪ ಭಕ್ತರು ಇದ್ದರು ಎನ್ನಲಾಗಿದ್ದು, ಸ್ಥಳೀಯರು ಹಾಗೂ ಇತರೆ ಪ್ರಯಾಣಿಕರು ಅಯ್ಯಪ್ಪ ಭಕ್ತರ ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಓರ್ವ ಯುವಕನಿಗೆ ಗಾಯವಾಗಿದೆ. ಯುವಕನನ್ನು ಕೇರಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ತಗುಲಿದ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆರಿಸಿದ್ದಾರೆ. ಮೈಸೂರಿನ ಹೂಟಗಳ್ಳಿ ನಿವಾಸಿಗಳು ಪ್ರಾಣಾಪಯಾದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)