ಕರ್ನಾಟಕ

ಬೈಕ್ ಗೆ ಡಿಕ್ಕಿ ಹೊಡೆದ ಕಾರು: ಫ್ಲೈಓವರ್‌ನಿಂದ ಕೆಳಗೆ ಬಿದ್ದು ಸವಾರ ಸಾವು

ಬೆಂಗಳೂರು,ಫೆ.15-ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ 40 ಅಡಿ ಫ್ಲೈಓವರ್‌ನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.

ತಮಿಳುನಾಡಿನ ಹೊಸೂರು ಮೂಲದ ಸಂಜಯ್‌ ಕುಮಾರ್ (21) ಮೃತಪಟ್ಟ ಯುವಕ. ಈತ ಆಟೊಮೊಬೈಲ್‌ ಶೋರೂಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ.

ಬೆಂಗಳೂರು-ನೆಲಮಂಗಲ ಎಲಿವೇಟೆಡ್‌ ಎಕ್ಸ್‌ಪ್ರೆಸ್‌ ವೇಯ ಅರಿಶಿನಕುಂಟೆ ಫ್ಲೈಓವರ್‌ ಮೇಲೆ ಈ ದುರ್ಘಟನೆ ನಡೆದಿದೆ. ಸಂಜಯ್ ಕುಮಾರ್ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ಅಮರಾಪುರಂ ಗ್ರಾಮಕ್ಕೆ ತೆರಳುತ್ತಿದ್ದ. ಅರಿಶಿನಕುಂಟೆ ಬಳಿ ಫ್ಲೈಓವರ್‌ ಮೇಲೆ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಟೊಯೊಟಾ ಇನೋವಾ ಕಾರು ಡಿಕ್ಕಿ ಹೊಡೆದಿದೆ. ನಿಯಂತ್ರಣ ಕಳೆದುಕೊಂಡು ಫ್ಲೈಓವರ್ ನಿಂದ ಬಿದ್ದು ಮೃತಪಟ್ಟಿದ್ದಾನೆ.

ಸರ್ವೀಸ್‌ ರಸ್ತೆಯ ಮೇಲೆ ಬಿದ್ದ ಈತನನ್ನು ಕೂಡಲೇ ಸ್ಥಳೀಯರು ಸಮೀಪದ ಆಸ್ಪತ್ರೆಗೆ ಸೇರಿಸಿದರು. ಆದರೆ ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ಕೂಡಲೇ ಇನೋವಾ ಚಾಲಕ ಕಾರನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದ್ದಾನೆ. ಆತನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. (ಎಂ.ಎನ್)

 

Leave a Reply

comments

Related Articles

error: