ಕರ್ನಾಟಕ

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಆರು ಮಂದಿಗೆ ಗಾಯ

ಸಾಗರ,ಫೆ.15-ಟವೆರಾ ಕಾರು ಮತ್ತು ಕ್ಯಾಂಟರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆರು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ತಾಳಗುಪ್ಪ ಬಳಿ ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: