ಪ್ರಮುಖ ಸುದ್ದಿ

ಮಾ.28 ರವರೆಗೆ ರಾಜಾಸೀಟು ಉದ್ಯಾನವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ರಾಜ್ಯ(ಮಡಿಕೇರಿ) ಫೆ.15 :- ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಟ್ಟದಲ್ಲಿ ಬಾಲವೇದಿಕೆ ಕಾರ್ಯಕ್ರಮದಲ್ಲಿ 5 ರಿಂದ 16 ವರ್ಷದ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮವು ಫೆಬ್ರವರಿ, 15 ರಿಂದ ಮಾರ್ಚ್, 28 ರವರೆಗೆ ಸಂಜೆ 5.30 ರವರೆಗೆ ಪ್ರತಿ 7 ಶನಿವಾರಗಳು, ರಾಜಾಸೀಟು ಉದ್ಯಾನವನ ಆವರಣದಲ್ಲಿ ನಡೆಯಲಿದೆ.

ಬಾಲವೇದಿಕೆ ಕಾರ್ಯಕ್ರಮದಲ್ಲಿ ಮಕ್ಕಳಿಂದ 50 ಸೋಲೋ ನೃತ್ಯ ಹಾಗೂ 25 ಸಂಸ್ಥೆಗಳಿಂದ ಸಮೂಹ ನೃತ್ಯ ಪ್ರದರ್ಶನವಿದೆ ಹಾಗೂ ಪ್ರದರ್ಶನ ನೀಡಿದ ಮಕ್ಕಳಿಗೆ ಪ್ರೋತ್ಸಾಹ ಧನ ಮತ್ತು ಪ್ರಮಾಣ ಪತ್ರ ನೀಡಲಾಗುವುದು.

ಆದ್ದರಿಂದ ಈ ನೃತ್ಯ ಪ್ರದರ್ಶನದಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ಹಾಗೂ ಸಂಸ್ಥೆಗಳು ಫೆಬ್ರವರಿ, 18 ರೊಳಗೆ ಮೊಬೈಲ್ ಸಂಖ್ಯೆ 8618861505, 6363285685 ನ್ನು ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: