ಪ್ರಮುಖ ಸುದ್ದಿ

ಫೆ.18 ರಿಂದ ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ

ರಾಜ್ಯ(ಮಡಿಕೇರಿ) ಫೆ.15 :- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡೆಯಲ್ಲಿ 2020-21ನೇ ಸಾಲಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಫೆಬ್ರವರಿ, 18 ರಂದು ಸೋಮವಾರಪೇಟೆ ತಾಲೂಕಿನ ಕೂಡಿಗೆ ಸರ್ಕಾರಿ ಕ್ರೀಡಾ ಪ್ರೌಢಶಾಲಾ ಕ್ರೀಡಾಂಗಣ, ಫೆಬ್ರವರಿ, 20 ರಂದು ಪೊನ್ನಂಪೇಟೆ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ ಹಾಗೂ ಫೆಬ್ರವರಿ, 25 ರಂದು ಮಡಿಕೇರಿ ನಗರದ ಜನರಲ್ ಕೆ.ಎಸ್. ತಿಮ್ಮಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಆಯಾಯ ದಿನಗಳಂದು ಹೆಸರನ್ನು ನೋಂದಾಯಿಸಿಕೊಳ್ಳಬಹುದು. 2020ರ ಜೂನ್, 01 ಕ್ಕೆ 11 ವರ್ಷದೊಳಗಿರಬೇಕು. 2009ರ ನಂತರ ಹುಟ್ಟಿದವರಾಗಿರಬೇಕು, 5ನೇ ತರಗತಿಗೆ ಮಾತ್ರ ಪ್ರವೇಶ ನೀಡಲಾಗುವುದು, 140 ಸೆಂ.ಮೀ ಎತ್ತರವಿರಬೇಕು.

ಆಯ್ಕೆಯಲ್ಲಿ ಭಾಗವಹಿಸಲು ಬರುವಂತಹ ಕ್ರೀಡಾಪಟುಗಳು 4 ನೇ ತರಗತಿಯಲ್ಲಿ ಓದುತ್ತಿರುವ ಧೃಢೀಕರಣ ಪತ್ರ/ ಜನ್ಮ ದಿನಾಂಕ ದೃಢೀಕರಣ ಪತ್ರ ಹಾಗೂ ನಡತೆ ದೃಢೀಕರಣ ಪತ್ರಗಳಿಗೆ ಶಾಲೆಯ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ ಕಡ್ಡಾಯವಾಗಿ ಹಾಜರು ಪಡಿಸಬೇಕು. ದೈಹಿಕ ಸಾಮಥ್ರ್ಯದ ಬಗ್ಗೆ ಸರ್ಕಾರಿ ವೈದ್ಯರಿಂದ ವೈದ್ಯಕೀಯ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ತರಬೇಕು. ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಊಟೋಪಹಾರ, ವಸತಿ ವ್ಯವಸ್ಥೆ ಮತ್ತು ಕ್ರೀಡಾಕಿಟ್‍ನ್ನು ಇಲಾಖೆ ವತಿಯಿಂದ ಉಚಿತವಾಗಿ ಒದಗಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ ಬಾಯಿ ಅವರು ತಿಳಿಸಿದ್ದಾರೆ.    (ಕೆಸಿಐ,ಎಸ್.ಎಚ್)

Leave a Reply

comments

Related Articles

error: