ಪ್ರಮುಖ ಸುದ್ದಿಮೈಸೂರು

ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್ ಟಿ.ಸೋಮಶೇಖರ್ : ರಾಮದಾಸ್ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಣೆ

ಮೈಸೂರು,ಫೆ.16:-   ಸಹಕಾರ ಸಚಿವರಾದ ಎಸ್.ಟಿ‌.ಸೋಮಶೇಖರ್ ಅವರು ಇಂದು  ಶಾಸಕರಾದ ಎಸ್.ಎ.ರಾಮದಾಸ್ ಅವರ ನಿವಾಸಕ್ಕೆ ಭೇಟಿ ನೀಡಿ ರಾಮದಾಸ್ ಅವರ ಆರೋಗ್ಯ ವಿಚಾರಿಸಿದರು.

ಇತ್ತೀಚಿಗೆ ರಾಮದಾಸ್ ಅವರು ಹೃದಯಾಘಾತಕ್ಕೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಏತನ್ಮಧ್ಯೆ  ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಚಿವ‌ ಎಸ್ ಟಿ ಸೋಮಶೇಖರ್ ಭೇಟಿ ನೀಡಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.  ಸಚಿವರಾದ ನಂತರ ಮೊದಲ‌ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದು, ಹಿಂದೆ ಅನರ್ಹರಾಗಿದ್ದ ವೇಳೆ ಚಾಮುಂಡೇಶ್ವರಿ ಮೊರೆ ಹೋಗಿದ್ದರು.  ಅರಣ್ಯ ಇಲಾಖೆ ಸಚಿವ ಆನಂದ್ ಸಿಂಗ್ ಬಗೆಗಿನ ಪ್ರಕರಣಗಳ ಮುಚ್ಚಿಹಾಕುವ ಹುನ್ನಾರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆನಂದ್ ಸಿಂಗ್ ಬಗ್ಗೆ ಸಿಎಂ ಗೆ ಎಲ್ಲಾ ಗೊತ್ತಿದೆ. ಅವರ ಬಗ್ಗೆ ಎಲ್ಲಾ ಮಾಹಿತಿ ಇದೆ. ಮಂತ್ರಿ ಆದ ತಕ್ಷಣ ಪ್ರಕರಣಗಳನ್ನು ಮುಚ್ಚಿಹಾಕಲು ಸಾಧ್ಯವಿಲ್ಲ. ಮುಚ್ಚಿಹಾಕಿದ್ರೆ ಅಧಿಕಾರಿಗಳಿಗೆ ತೊಂದ್ರೆ ಆಗುತ್ತೆ, ಇದೆಲ್ಲಾ ಸಾಧ್ಯವಿಲ್ಲ ಎಂದರು. ಕಂದಾಯ ಸಚಿವ ಅಶೋಕ್ ಪುತ್ರನ ಅಪಘಾತ ಪ್ರಕರಣಕ್ಕೆ ಪ್ರತಿಕ್ರಿಯಿಸಿ ಈ ವಿಚಾರದಲ್ಲಿ ಅಶೋಕ್ ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ಅದರ ಬಗ್ಗೆ ಅಷ್ಟಾಗಿ ಮಾಹಿತಿ ತಿಳಿದಿಲ್ಲ ಎಂದುತ್ತರಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: