ಕರ್ನಾಟಕ

ಚಿತ್ರದುರ್ಗ ಡಿಸಿ ಕಾರಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ

ಚಿತ್ರದುರ್ಗ,ಫೆ.18-ಜಿಲ್ಲಾಧಿಕಾರಿಗಳ ಕಾರಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಶಿವಗಂಗಾ ಗ್ರಾಮದ ಬಳಿ ನಡೆದಿದೆ.

ಚಿತ್ರದುರ್ಗ ಡಿಸಿ ವಿನೋತ್ ಪ್ರಿಯಾ ಚಲಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಜಿಲ್ಲಾಧಿಕಾರಿ ವಿನೊತ್ ಪ್ರಿಯಾ ಆರೋಗ್ಯವಾಗಿದ್ದಾರೆ. ಘಟನೆ ಬಳಿಕ ಡಿಸಿ ವಿನೋತ್ ಪ್ರಿಯಾ ಬೇರೆ ಕಾರಿನಲ್ಲಿ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಈ ಘಟನೆ ಸಂಬಂಧ ಚಿತ್ರದುರ್ಗ ಚಿತ್ರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. (ಎಂ.ಎನ್)

Leave a Reply

comments

Related Articles

error: