ಪ್ರಮುಖ ಸುದ್ದಿವಿದೇಶ

ಕೊರೊನಾ ವೈರಸ್: ಮೃತರ ಸಂಖ್ಯೆ 2004ಕ್ಕೆ ಏರಿಕೆ

ಬೀಜಿಂಗ್‌,ಫೆ.19-ಮಾರಣಾಂತಿಕ ಕೊರೊನಾ ವೈರಸ್ (ಕೋವಿಡ್ 19) ಗೆ ಬಲಿಯಾದವರ ಸಂಖ್ಯೆ 2000ದ ಗಡಿ ದಾಟಿದೆ.

ಮಂಗಳವಾರ ಒಂದೇ ದಿನದಲ್ಲಿ ಚೀನಾದಲ್ಲಿ 136 ಮಂದಿ ಮೃತಪಟ್ಟಿದ್ದಾರೆ. ಇದರಿಂದ ಮೃತಪಟ್ಟವರ ಸಂಖ್ಯೆ 2004ಕ್ಕೆ ಏರಿಕೆಯಾಗಿದೆ. ಮಂಗಳವಾರ ಒಂದೇ ದಿನ 1749 ಜನರು ಹೊಸದಾಗಿ ಸೋಂಕಿಗೆ ಒಳಗಾಗಿದ್ದಾರೆ.

ಸೋಂಕಿಗೆ ಒಳಗಾದವರ ಸಂಖ್ಯೆ 75,000ದ ಗಡಿದಾಟಿದೆ. ಈ ಪೈಕಿ 12000 ಜನರ ಸ್ಥಿತಿ ಗಂಭೀರವಾಗಿದೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಸಮಿತಿ ತಿಳಿಸಿದೆ.

14376 ಜನರು ಗುಣಮುಖರಾಗಿದ್ದು, ಅವರನ್ನೆಲ್ಲ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಸೋಂಕನ್ನು ನಿಯಂತ್ರಿಸಲು ಹಲವಾರು ಕಠಿಣ ಕ್ರಮಗಳನ್ನು ಅನುಸರಿಸುತ್ತಿದೆ. ಸಾರ್ವಜನಿಕ ಪ್ರದೇಶಗಳು ಹಾಗೂ ಸಂಚಾರ ದಟ್ಟಣೆ ಇರುವ ಪ್ರದೇಶಗಳಲ್ಲಿ ಹಲವಾರು ಕ್ರಮಗಳನ್ನು ಅನುಸರಿಸುವಂತೆ ಚೀನಾ ಸರ್ಕಾರ ನಾಗರಿಕರಿಗೆ ಕಟ್ಟಪ್ಪಣೆ ಮಾಡಿದೆ. ಚೀನಾದ ಈ ಕಠಿಣ ಕ್ರಮಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘನೆ ವ್ಯಕ್ತಪಡಿಸಿದೆ. (ಎಂ.ಎನ್)

Leave a Reply

comments

Related Articles

error: