ಮೈಸೂರು

ಸಾರಿಗೆ ನೌಕರರ ಮುಷ್ಕರಕ್ಕೆ ಕರೆ: ನಗರದಲ್ಲಿ ಬೆಂಬಲವಿಲ್ಲ

ಮೈಸೂರು,ಫೆ.20-ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರ ಒಕ್ಕೂಟ ಕರೆ ನೀಡಿರುವ ಮುಷ್ಕರಕ್ಕೆ ನಗರದಲ್ಲಿ ಬೆಂಬಲ ವ್ಯಕ್ತವಾಗಿಲ್ಲ.

ಮೈಸೂರಿನಲ್ಲಿ ಯಥಾ ಸ್ಥಿತಿ ಮುಂದುವರೆದಿದೆ. ಬಸ್ ಗಳು ಎಂದಿನಂತೆ ಸಂಚರಿಸುತ್ತಿವೆ. ಶಾಲಾ ಕಾಲೇಜು, ಕೆಲಸಕ್ಕೆ ತೆರಳಬೇಕಾದವರಿಗೆ ಯಾವುದೇ ತೊಂದರೆ ಇಲ್ಲ. ನಗರದ ಸಾರಿಗೆ ನೌಕರರು ಮುಷ್ಕರಕ್ಕೆ ಬಾಹ್ಯ ಬೆಂಬಲ ನೀಡಿದ್ದಾರೆ.

ಕೆಲವು ಜಿಲ್ಲೆಯ ನೌಕರ ಸಂಘಗಳಿಂದ ಮಾತ್ರ ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗಿದೆ. ಸಾರಿಗೆ ನಿಗಮ ಈಗಾಗಲೇ 32 ಸಾವಿರಕ್ಕೂ ಹೆಚ್ಚು ನೌಕರರಿಗೆ ಇಂದು ರಜೆ ತೆರವುಗೊಳಿಸಿದೆ. ರಜೆ ಹಾಕಿದಲ್ಲಿ ದಿನದ ಸಂಬಳ ಕಡಿತಗೊಳಿಸುವ ಎಚ್ಚರಿಕೆ ನೀಡಿದೆ. (ಕೆ.ಎಸ್, ಎಂ.ಎನ್)

Leave a Reply

comments

Related Articles

error: